Slide
Slide
Slide
previous arrow
next arrow

ಹಳಿಯಾಳದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ರಕ್ತದಾನ ಶಿಬಿರ

300x250 AD

ಹಳಿಯಾಳ: ವಿಶ್ವ ಮೆಚ್ಚಿದ ನಾಯಕ, ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ನಗರದ ಶ್ರೀ ಗಣೇಶ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಹುಬ್ಬಳ್ಳಿಯ ರಾಷ್ಟ್ರೋತ್ಥಾನ ರಕ್ತಕೇಂದ್ರ ಇವರ ಸಹಯೋಗದೊಂದಿಗೆ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಹಳಿಯಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುನೀಲ್ ಹೆಗಡೆ ಚಾಲನೆ ನೀಡಿದರು.

ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಮಾದರಿ ಆಡಳಿತದ ಮೂಲಕ ವಿಶ್ವ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿದ್ದಾರೆ. ಅವರ ಜನ್ಮದಿನದ ಅವಿಸ್ಮರಣೀಯವಾಗಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಆಯೋಜಿಸಿರುವ ರಕ್ತದಾನ ಶಿಬಿರದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ರಕ್ತದಾನ ಎಲ್ಲ ದಾನಗಳಲ್ಲೇ ಶ್ರೇಷ್ಠವಾಗಿ, ಜೀವ ಉಳಿಸಲು ನೆರವಾಗುತ್ತದೆ ಎಂದು ಹೇಳಿದರು.

300x250 AD

ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಗಣಪತಿ ಕರಂಜೇಕರ, ಪ್ರಧಾನ ಕಾರ್ಯದರ್ಶಿ ಅನಿಲ್ ಮುತ್ನಾಳೆ, ಪುರಸಭೆ ಸದಸ್ಯರಾದ ಉದಯ ಹೂಲಿ, ರೂಪಾ ಗಿರಿ, ಸಂಗೀತಾ ಜಾಧವ್, ಪ್ರಮುಖರಾದ ಶಿವಾಜಿ ನರಸಾನಿ, ವಿಲಾಸ ಯಡವಿ, ಉಮೇಶ ದೇಶಪಾಂಡೆ, ವಾಸುದೇವ ಪೂಜಾರಿ, ಯಲ್ಲಪ್ಪ ಹೊನ್ನೋಜಿ, ಆಕಾಶ ಉಪ್ಪಿನ, ಶಿವಾಜಿ ಪಾಟೀಲ್, ಜಯಲಕ್ಷ್ಮೀ ಚವ್ಹಾಣ, ಸಂಗೀತಾ ಜಾವಳೇಕರ, ಸಿದ್ದು ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top