ಶಿವಮೊಗ್ಗ: ಮಡದಿಯ ಸಾವಿನ ದುಃಖದಿಂದ ಮನನೊಂದ ಪೊಲೀಸರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯ ಮುಖ್ಯಪೇದೆ ಜಯಪ್ಪ ಉಪ್ಪಾರ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದು, ಇವರ ಮಡದಿಯು ಎರಡು ದಿನದ ಹಿಂದೆ ಅನಾರೋಗ್ಯದ ಕಾರಣದಿಂದ ಮರಣ ಹೊಂದಿದ್ದಳು. ಇದನ್ನೇ ಮನಸ್ಸಿಗೆ ಹಾಕಿಕೊಂಡು ಇವರು ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಶಿವಮೊಗ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.