ಕುಮಟಾ: ಶಿಥಿಲಾವಸ್ತೆಯಲ್ಲಿರುವ ಪಟ್ಟಣದ ಹೊಸ ಹೆರವಟ್ಟಾದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ, ಕಟ್ಟಡ ನವೀಕರಿಸುವುದರ ಬಗ್ಗೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಿದರು.
ನಂತರ ಮಾತನಾಡಿದ ಅವರು, ಹಲವು ವರ್ಷಗಳ ಹಿಂದೆಯೇ ನಿರ್ಮಿಸಲಾದ ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವು ಈಗ ಶಿಥಿಲಾವಸ್ತೆಗೆ ತಲುಪಿದೆ. ಕಟ್ಟಡ ನವೀಕರಿಸುವ ಬಗ್ಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕವರ್ಗ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಿದರೆ, ಸರ್ಕಾರದ ಮಟ್ಟದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದ ಅವರು, ಬೆಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮಮತಾ ಭಟ್ಟ, ಎಸ್.ಡಿ.ಎಮ್. ಸಿ ಅಧ್ಯಕ್ಷ ರಾಜು ಮಡಿವಾಳ, ಬಿಜೆಪಿ ಎಸ್.ಸಿ ಮೋರ್ಚಾ ತಾಲೂಕಾಧ್ಯಕ್ಷ ಮಂಜುನಾಥ ಮುಕ್ರಿ, ಯುವಮೋರ್ಚಾ ಪದಾಧಿಕಾರಿಗಳಾದ ಆದಿತ್ಯ ಶೇಟ್, ಸೂರಜ ಶೇಟ್, ಚಿನ್ಮಯ ಕಾಮತ ಸೇರಿದಂತೆ ಇನ್ನಿತರರು ಇದ್ದರು.