ಕುಮಟಾ: ಇಲ್ಲಿನ ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ. ಕೆ. ಭಂಡಾರಕರ್ ಸರಸ್ವತಿ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಇತ್ತೀಚಿಗೆ ಹಳಿಯಾಳದಲ್ಲಿ ನಡೆದ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಜಯಗಳಿಸಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗುವುದರೊಂದಿಗೆ ಕಾಲೇಜಿನ ಹಾಗೂ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಗುಂಡು ಎಸೆತದಲ್ಲಿ ಗಣೇಶ ಪ್ರಥಮ ಸ್ಥಾನಗಳಿಸಿ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪ್ರಜ್ಞಾ, ಆರ್ಜು, ಧ್ರುವ, ಪ್ರೇಮ, ಕಾರ್ತಿಕೇಯ ಕರಾಟೆಯಲ್ಲಿ, ಸಿಂಚನಾ ಯೋಗದಲ್ಲಿ, ಅನಿರುದ್ಧ ತ್ರೊಬಾಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲ ಕಿರಣ ಭಟ್ಟ, ಉಪಪ್ರಾಂಶುಪಾಲೆ ಸುಜಾತಾ ಹೆಗಡೆ, ಕ್ರೀಡಾ ಸಂಯೋಜಕ ಪದ್ಮನಾಭ ಪ್ರಭು, ಅವಿನಾಶ ಅಮ್ಮನಗಿ, ತ್ರಿವೇಣಿ ನಾಯ್ಕ, ದೈಹಿಕ ಶಿಕ್ಷಕ ದಿವಾಕರ ನಾಯ್ಕ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.
ReplyForward