Slide
Slide
Slide
previous arrow
next arrow

ಗಾಂಧಿ ಜಯಂತಿ ಪ್ರಯುಕ್ತ ಶಿಕ್ಷಕರಿಗೆ ವಿಶೇಷ ತರಬೇತಿ

300x250 AD

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಸಿದ ರಾಷ್ಟಪಿತ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ಸಮರ್ಪಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿ ನಂತರ ಶಾಲಾ ವಿದ್ಯಾರ್ಥಿಗಳಿಂದ ಶ್ರಮದಾನವನ್ನು ನಡೆಸಲಾಯಿತು.

ಅನಂತರ ರಾಷ್ಟ್ರೋತ್ಥಾನ ಪರಿಷತ್ ಹಾಗೂ ಪ್ರಶಿಕ್ಷಣ ಭಾರತಿ ಇವರ ಸಹಯೋಗದೊಂದಿಗೆ ಶಾಲೆಯಲ್ಲಿ ‘ಅನುವರ್ತಿ ಪ್ರಶಿಕ್ಷಣ ವರ್ಗ’ವನ್ನು ಏರ್ಪಡಿಸಲಾಗಿತ್ತು.

300x250 AD

ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕರು ಈ ತರಬೇತಿಯ ಪ್ರಯೋಜನವನ್ನು ಪಡೆದರು. ಸಮಾರೋಪ ಸಮಾರಂಭದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇ0ದ್ರ ಸರಸ್ವತಿ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ನೀಡಿ, ಸರ್ವರನ್ನು ಆಶೀರ್ವದಿಸಿದರು.

Share This
300x250 AD
300x250 AD
300x250 AD
Back to top