Slide
Slide
Slide
previous arrow
next arrow

ಸಿದ್ದರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ: ಯತ್ನಾಳ್

300x250 AD

ಯಾದಗಿರಿ: ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಶಹಾಪುರದಲ್ಲಿ ಮಾತನಾಡಿದ ಯತ್ನಾಳ್, ಈಗ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ನಾನು ಮೊದಲೇ ಹೇಳಿದ್ದೇನೆ. ಡಿಸೆಂಬರ್ ತನಕ ಈ ಸರ್ಕಾರ ಇರುವುದಿಲ್ಲ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿ.ಕೆ. ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಇಳಿಸಲು ಡಿ.ಕೆ. ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದು, ಶಾಮನೂರು ಶಿವಶಂಕರಪ್ಪ ಮತ್ತು ಬಿ.ಕೆ. ಹರಿಪ್ರಸಾದ್ ಮಾತನಾಡಲು ಡಿ.ಕೆ. ಶಿವಕುಮಾರ್ ಅವರದ್ದೇ ಡೈರೆಕ್ಷನ್ ಎಂದು ಯತ್ನಾಳ್ ಆರೋಪಿಸಿದ್ದಾರೆ.

300x250 AD

ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಇದೆ. ನಾಲ್ಕೈದು ಬಾರಿ ಶಾಸಕರಾದರೂ ಸಚಿವರಾಗಿಲ್ಲ ಎನ್ನುವ ಅಸಮಾಧಾನ ಇದೆ. ಕಾಂಗ್ರೆಸ್‌ನಲ್ಲಿ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಈ ಸರ್ಕಾರ ಬಹಳ ದಿನ ಇರಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಬಹಳಷ್ಟು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

Share This
300x250 AD
300x250 AD
300x250 AD
Back to top