ಯಲ್ಲಾಪುರ: ಹಳಿಯಾಳದಲ್ಲಿ ನಡೆದಿದ್ದ 2023-24ನೇ ಸಾಲಿನ ಪದವಿಪೂರ್ವ ಕಾಲೇಜು, ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಯಲ್ಲಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಶುಭ ಕೋರಿದ್ದಾರೆ.
ಯಲ್ಲಾಪುರ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
