ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ತರಬೇತಿ ಸಂಸ್ಥೆಯಲ್ಲಿ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಅಕ್ಟೋಬರ್ ತಿಂಗಳಿನಲ್ಲಿ 45 ದಿನಗಳ ಕಾಲ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ಮತ್ತು 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು ವಿಳಾಸಗಳನ್ನು ನೋಂದಾಯಿಸಿಕೊಳ್ಳಲು ಅ.13 ಕೊನೆಯ ದಿನಾಂಕವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದರಿಗೆ ಮತ್ತು ಗ್ರಾಮೀಣ ಭಾಗದವರಿಗೆ ಮೊದಲು ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ ಹಾಗೂ ಬ್ಯಾಂಕಿನಿ0ದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತ ಯೋಜನಾ ವರದಿ ತಯಾರಿಕೆ ಇನ್ನೇತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ತರಬೇತಿ ಸಂಸ್ಥೆ ನಿರ್ದೇಶಕರು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ Tel:+919980510717, Tel:+919482188780, Tel:+919483485489, Tel:+919742438790 ನ್ನು ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ತರಬೇತಿ ಸಂಸ್ಥೆ ನಿರ್ದೇಶಕ ಪ್ರಶಾಂತ ಬಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.