ಕಾರವಾರ: ಇಲ್ಲಿನ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪಡಿಸಿಕೊಂಡಿರುವುದಕ್ಕೆ ಪರಿಹಾರಗಳ ಬದಲಿಗೆ ನಿವೇಶನಗಳ ಹಂಚಿಕೆ ನಿಯಮಗಳು 2009 ರಂತೆ ಭೂ ಮಾಲೀಕರ ಸಹಭಾಗಿತ್ವದಲ್ಲಿ 50:50ರ ಅನುಪಾತದಲ್ಲಿ ನಿವೇಶನಗಳನ್ನು ಹಂಚಿಕೊ0ಡು ಪ್ರಾಧಿಕಾರ ಮತ್ತು ಭೂ ಮಾಲೀಕರು ತಲಾ ಶೇಕಡಾ 50 ವಸತಿ ಯೋಜನೆಯನ್ನು ಕೈಗೊಳ್ಳಲು ಭೂಮಿಯನ್ನು ಬಿಟ್ಟುಕೊಡಲು ಆಸಕ್ತಿಯುಳ್ಳ ಭೂ ಮಾಲಕರುಗಳು ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ ಲಿಖಿತ ರೂಪದಲ್ಲಿ ತಮ್ಮ ಸಮ್ಮತಿಯನ್ನು ವ್ಯಕ್ತಪಡಿಸಬಹುದಾಗಿದೆ. ಈ ಸಂಬ0ಧ ಹೆಚ್ಚಿನ ಮಾಹಿತಿಯನ್ನು ಪ್ರಾಧಿಕಾರದ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.