Slide
Slide
Slide
previous arrow
next arrow

ಅ.8 ಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ

300x250 AD

ಕಾರವಾರ: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದವರಿಗೆ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳು ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ಅಕ್ಟೋಬರ್ 08 ರಂದು ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಧಾರವಾಡದಲ್ಲಿನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ನಿರ್ದೇಶನಾಲಯದಿಂದ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ವಿಳಾಸ: ಕಿಟೆಲ್ ಆರ್ಟ್ಸ ಕಾಲೇಜ್, ಜುಬ್ಲಿ ಸರ್ಕಲ್ ಹತ್ತಿರ, ಪಿ.ಬಿ ರೋಡ, ಧಾರವಾಡ-580001 ಮೋಬೈಲ್ 9886383284

300x250 AD

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಅಥವಾ ವೆಬ್‌ಸೈಟ್ https://dom.karnataka.gov.in/ ಅಥವಾ ತಮ್ಮ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರವಾರ ದೂರವಾಣಿ ಸಂಖ್ಯೆ 08382-220336/ ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ 8277799990 ಗೆ ಸಂಪರ್ಕಿಸುವ0ತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top