ಕಾರವಾರ: ಶಿರಸಿ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಖಂಡೂ ಭೇಟಿ ನೀಡಿ, ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಶಿರಸಿಯ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಅಂಗಾ0ಶ ಕೃಷಿ ಪ್ರಯೋಗಾಲಕ್ಕೆ ಭೇಟಿ ನೀಡಿ ಪ್ರಯೋಗಾಲಯದ ಮಾಹಿತಿ ಪಡೆದು, ಅಲ್ಲಿನ ಸೌಲಭ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಉಂಚಳ್ಳಿ ಗ್ರಾಮ ಪಂಚಾಯಿತಿಯ ಬಿಕಾನ್ ಗ್ರಂಥಾಲಯಕ್ಕೆ ಭೇಟಿ ನೀಡಿ, ಸುವ್ಯವಸ್ಥಿತವಾಗಿ ಗ್ರಂಥಾಲಯ ಮುನ್ನಡೆಸಿಕೊಂಡು ಹೋಗುತ್ತಿರುವ ಸಿಬ್ಬಂದಿಯನ್ನು ಅಭಿನಂದಿಸಿದರು. ಉಂಚಳ್ಳಿ ಪಂಚಾಯಿತಿಯಲ್ಲಿ ನರೇಗಾ ಒಗ್ಗೂಡಿಸುವ ಯೋಜನೆಯಡಿ ಪ್ರಗತಿಯಲ್ಲಿರುವ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿ ವೀಕ್ಷಿಸಿದರು.
ನಂತರ ಕಲ್ಲಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಉನ್ನತೀಕರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಪಕ್ಕದ ಸಹಸ್ರಳ್ಳಿ ಗ್ರಾಮದ ವ್ಯಾಪ್ತಿಯ ಸಿದ್ದಾರ್ಥ ನಾಯ್ಕ ಅವರು ತೋಟಗಾರಿಕೆ ಇಲಾಖೆಯ ಖಏಗಿಙ ಯೋಜನೆಯಡಿ ನಿರ್ಮಿಸಿದ ಕೃಷಿ ಹೊಂಡ ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ. ಸತೀಶ ಬಿ.ಪಿ., ಶಿರಸಿ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ ಹೆಗಡೆ ಹಾಗೂ ಪಿಆರ್‌ಇಡಿ ಮತ್ತು ಆರ್‌ಡಬ್ಲೂಎಸ್ ಇಲಾಖೆಯ ವಿವಿಧ ಅಧಿಕಾರಿಗಳು, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.