Slide
Slide
Slide
previous arrow
next arrow

ಕ್ರೀಡಾಕೂಟ: ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ದಾಂಡೇಲಿ: ಹಳಿಯಾಳದ ಶಿವಾಜಿ ಮೈದಾನದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಮೂವರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನವನ್ನು ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.

ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಫಲಕ ಕೇಶವ ರಾಂದಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸ್ಪಂದನ ಎಸ್.ಮುನವಳ್ಳಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೀಣಾ.ವಿ.ದೇಸಾಯಿ ಇವರಿಬ್ಬರು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

300x250 AD

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮೂವರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯೆ ಆಶಾಲತಾ ಜೈನ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರಕಾಶ್ ಮೆಹತಾ ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Share This
300x250 AD
300x250 AD
300x250 AD
Back to top