ಸಿದ್ದಾಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ನಡೆಸಲಾಯಿತು.
ತಾಲೂಕಿನ ಯೋಜನಾಧಿಕಾರಿ ಪ್ರಭಾಕರ ನಾಯ್ಕ್ರವರು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ವ ಉದ್ಯೋಗವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿರುವ 13 ಕುಟುಂಬವನ್ನು ಆಯ್ಕೆ ಮಾಡಿಕೊಂಡು ಪ್ರತಿಯೊಂದು ಕುಟುಂಬಕ್ಕೆ 20 ಗುಲಾಬಿ (ಬಟನ್ಸ್) ಗಿಡವನ್ನು ಉಚಿತವಾಗಿ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಗುಲಾಬಿ ಗಿಡ ನಾಟಿ ಮತ್ತು ನಿರ್ವಹಣೆ ಬಗ್ಗೆ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ದಿನೇಶ್‌ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ತಲವಟ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸನ್ನ ಡಿ.ಎನ್. ಅಧ್ಯಕ್ಷತೆ ವಹಿಸಿದ್ದರು. ಕಳೆದ ನಾಲ್ಕು ವರ್ಷದಿಂದ ಗುಲಾಬಿ ಕೃಷಿಯಲ್ಲಿ ತೊಡಗಿಸಿಕೊಂಡು ಸ್ವ ಉದ್ಯೋಗವನ್ನು ಮಾಡುತ್ತಿರುವ ಇಂದ್ರಕುಮಾರ್ ಅವರು ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ನಾಗರತ್ನ, ಜ್ಞಾನವಿಕಾಸ ಸಮನ್ವಯ ಅಧಿಕಾರಿಯಾದ ಪ್ರಭಾವತಿ ರವರು, ಒಕ್ಕೂಟದ ಅಧ್ಯಕ್ಷರಾದ ಶಾಂತರಾಜ್ ರವರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.