ಮುಂಡಗೋಡ: ತಾಲೂಕಿನ ಶಿಂಗನಳ್ಳಿ ಜಲಾಶಯ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಗುರುವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 38 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಮುಖ ಹಾಗೂ ಮೈಭಾಗ ಕೊಳೆತು ವಿಕಾರವಾಗಿದೆ. ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಶವದ ಬಲಗೈ ಕಟ್ ಆಗಿದ್ದು, ಇದು ಆತ್ಮ ಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಸ್ಥಳಕ್ಕೆ ಮುಂಡಗೋಡ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.