Slide
Slide
Slide
previous arrow
next arrow

ಉತ್ತರ ಕನ್ನಡದ ಬೀಚ್‌ಗಳತ್ತ ಪ್ರವಾಸಿಗರ ಚಿತ್ತ

300x250 AD

ಕಾರವಾರ: ಜಿಲ್ಲೆಯಲ್ಲಿ ಮಳೆ ಆರ್ಭಟ ತಗ್ಗಿದೆ. ಕಳೆದ ನಾಲ್ಕು ತಿಂಗಳಿನಿಂದ ಭಾರಿ ಮಳೆ ಕಾರಣಕ್ಕೆ ಬಂದಾಗಿದ್ದ ಪ್ರವಾಸಿ ತಾಣಗಳತ್ತ ಇದೀಗ ಪ್ರವಾಸಿಗರು ಮುಖ ಮಾಡುತ್ತಿದ್ದು, ಕರಾವಳಿಯ ಕಡಲ ತೀರಗಳಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಸಮುದ್ರಕ್ಕಿಳಿಯಲು ಪ್ರವಾಸಿಗರಿಗೆ ಅವಕಾಶ ಸಿಕ್ಕಿದ್ದು, ಖುಷಿ ಅನುಭವಿಸುತ್ತಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಮಳೆಯ ಕಾರಣಕ್ಕೆ ಕಡಲತೀರಗಳಿಗೆ ಇಳಿಯಲು ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಇದೀಗ ಮಳೆ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಸಮುದ್ರಕ್ಕಿಳಿಯಲು ಪ್ರವಾಸಿಗರಿಗೆ ಅವಕಾಶ ಸಿಗುವಂತಾಗಿದ್ದು, ಕೆಲಸದ ಒತ್ತಡದ ನಡುವೆ ಪ್ರವಾಸಕ್ಕೆಂದು ಬಂದಿದ್ದವರು ಸಮುದ್ರದಲ್ಲಿ ಈಜಾಡಿ ಜಂಜಾಟದ ಜೀವನವನ್ನು ಮರೆತು ರಿಲ್ಯಾಕ್ಸ್ ಮಾಡುತ್ತಿದ್ದಾರೆ.

ಇನ್ನು ಮಳೆಗಾಲದ ವೇಳೆಯಲ್ಲಿ ಕಡಲತೀರಗಳಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವುದರ ಜೊತೆಗೆ ನೀರಿನ ಸೆಳೆತ ಸಹ ಇರುವುದರಿಂದ ಪ್ರವಾಸಿಗರಿಗೆ ನೀರಿಗೆ ಇಳಿಯಲು ನಿರ್ಬಂಧ ಹೇರಲಾಗುತ್ತದೆ. ಪ್ರತಿವರ್ಷ ಉತ್ತರಕನ್ನಡ ಜಿಲ್ಲೆಯ ಕಡಲತೀರಗಳಲ್ಲಿ ಜೂನ್‌ನಿಂದ ಸೆಪ್ಟಂಬರ್‌ವರೆಗೆ ಬೀಚ್‌ಗಳಿಗೆ ನಿಷೇಧ ಅವಧಿಯಾಗಿದ್ದು, ಈ ಅವಧಿಯಲ್ಲಿ ಸಮುದ್ರ ಅಪಾಯಕಾರಿಯಾಗುವುದರಿಂದ ನೀರಿಗಿಳಿಯಲು ಯಾರಿಗೂ ಸಹ ಅವಕಾಶ ಇರುವುದಿಲ್ಲ.

ಇದೀಗ ಮಳೆ ಕಡಿಮೆಯಾಗಿರುವುದರ ಜೊತೆಗೆ ನಿಷೇಧ ಅವಧಿಯೂ ಮುಗಿದಿರುವುದರಿಂದ ಪ್ರವಾಸಿಗರು ಸಮುದ್ರಕ್ಕಿಳಿದು ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ಇಲ್ಲಿನ ಕಡಲತೀರದಲ್ಲಿರುವ ವಾರ್‌ಶಿಪ್ ಮ್ಯೂಸಿಯಂ, ರಾಕ್‌ ಗಾರ್ಡನ್, ಸಾಲುಮರದ ತಿಮ್ಮಕ್ಕ ವನ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೂ ಸಹ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಹರಿದುಬರುತ್ತಿರುವುದು ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಿದೆ ಎನ್ನುತ್ತಾರೆ ಪ್ರವಾಸಿ ತಾಣದ ನಿರ್ವಾಹಕರು.

300x250 AD

ಇನ್ನು ಕಾರವಾರ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಶೀಘ್ರದಲ್ಲೇ ಯುದ್ಧವಿಮಾನ ವಸ್ತುಸಂಗ್ರಹಾಲಯ ಸಹ ಸಿದ್ಧವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರವಾರಕ್ಕೆ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲಿದೆ. ಆದರೆ ಉತ್ತರಕನ್ನಡ ಜಿಲ್ಲೆ ಹತ್ತು ಹಲವು ಪ್ರವಾಸಿ ತಾಣಗಳನ್ನು ಹೊಂದಿದ್ದರೂ ಅವುಗಳ ಕುರಿತು ಸೂಕ್ತ ಮಾಹಿತಿ ಲಭ್ಯವಾಗುತ್ತಿಲ್ಲವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ, ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

K.DINESH GAONKAR

Share This
300x250 AD
300x250 AD
300x250 AD
Back to top