ಕಾರವಾರ: ಶಿರಸಿಯ ಅರಣ್ಯ ಮಹಾವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ವೈದ್ಯಕೀಯ ಸೌಲಭ್ಯವನ್ನುಒದಗಿಸುವ ಸಲುವಾಗಿ ಸಂದರ್ಶಕ ವೈದ್ಯರ ಹುದ್ದೆಗೆ ಎಂ.ಬಿ.ಬಿ.ಎಸ್/ ಬಿ.ಎ.ಎಮ್.ಎಸ್/ ಬಿ.ಹೆಚ್.ಎಮ್.ಎಸ್. ಉತ್ತೀರ್ಣರಾಗಿರುವ ಹಾಗೂ ಕೆ.ಎಂ.ಸಿ.ಯ ನೊಂದಣಿಯನ್ನು ಹೊಂದಿರುವ, 179 ದಿನಗಳ ಅವಧಿಗೆ ಮೀರದಂತೆ ತಾತ್ಕಾಲಿಕವಾಗಿ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯಎರಡು ಪ್ರತಿಗಳೊಂದಿಗೆ ಅ.11ರಂದು ಬೆಳಗ್ಗೆ 11 ಗಂಟೆಗೆ ಡೀನ್ (ಅರಣ್ಯ), ಅರಣ್ಯ ಮಹಾವಿದ್ಯಾಲಯ ಶಿರಸಿರವರ ಕಾರ್ಯಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಬರುವಾಗತಮ್ಮ ವಿದ್ಯಾರ್ಹತೆಗೆ ಸಂಬ0ಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ದೃಢೀಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಬೇಕೆಂದು ಅರಣ್ಯ ಮಹಾವಿದ್ಯಾಲಯ ಶಿರಸಿ ಡೀನ್ (ಅರಣ್ಯ) ಆರ್.ವಾಸುದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.