ಕಾರವಾರ: ಬದನಗೋಡಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂತೊಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಆಟದ ಮೈದಾನವನ್ನು ಬದನಗೋಡ ಗ್ರಾಮ ಪಂಚಾಯಿತಿ ಅಧ್ಯಕ್ಷ ನಟರಾಜ ಬಿ.ಹೊಸೂರ ಉದ್ಘಾಟಿಸಿದರು.
ಪ್ರಸ್ತುತ ದಿನಗಳಲ್ಲಿ ಮಕ್ಕಳು ಶಿಕ್ಷಣದೊಂದಿಗೆ ಸದೃಢ ಶರೀರವನ್ನು ಕಾಯ್ದುಕೊಳ್ಳಬೇಕಿದೆ. ಹೀಗಾಗಿ ಮಕ್ಕಳ ದೈಹಿಕ ಚಟುವಟಿಕೆ ಹೆಚ್ಚಿಸಲು ಪ್ರತಿಯೊಂದು ಶಾಲೆಯೂ ಆಟದ ಮೈದಾನ ಹೊಂದುವುದು ಅವಶ್ಯವಾಗಿದೆ ಎಂದು ಹೇಳಿದರು.
ಇದ್ದರು. ಬದನಗೋಡ ಪಂಚಾಯಿತಿ ಪಿಡಿಓ ಪಿ.ಪಿ.ಲಮಾಣಿ ಮಾತನಾಡಿ, 2022-23ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ 2.18 ಲಕ್ಷ ವೆಚ್ಚದಲ್ಲಿ ಶಾಲಾ ಆಟದ ಮೈದಾನ ನಿರ್ಮಿಸಿದ್ದು, ಒಟ್ಟು 551 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬದನಗೋಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಕ್ಕಮಹಾದೇವಿ ಅಲೂರ, ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಶಾಲಾ ಶಿಕ್ಷಕ ವರ್ಗ ಮತ್ತು ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.