Slide
Slide
Slide
previous arrow
next arrow

ಮೈಸೂರು ದಸರಾ: ಕನ್ನಡ ಪುಸ್ತಕ ಮಾರಾಟ ಮೇಳ

300x250 AD

ಕಾರವಾರ: ಮೈಸೂರು ದಸರಾ ಉತ್ಸವ- 2023ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಅ.15ರಿಂದ 23ರವರೆಗೆ ಮೈಸೂರುದಸರಾಕನ್ನಡ ಪುಸ್ತಕ ಮಾರಾಟ ಮೇಳ-2023ನ್ನು ಓವಲ್ ಗ್ರೌಂಡ್, ಹಳೆಯ ಡಿ.ಸಿ.ಆಫೀಸ್ ಪಕ್ಕ, ಮೈಸೂರು ಇಲ್ಲಿ ಏರ್ಪಡಿಸಲಾಗಿದೆ.

ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000 ಗಳ ಭದ್ರತಾ ಠೇವಣಿ ಡಿಡಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು–ಅವರಹೆಸರಿನಲ್ಲಿಡಿಡಿಯನ್ನುಸಲ್ಲಿಸುವುದು. ಮೇಳದಲ್ಲಿಭಾಗವಹಿಸಲುಇಚ್ಚಿಸುವ ಪ್ರಕಾಶಕರು/ ಮಾರಾಟಗಾರರು ನಿಗದಿತಅರ್ಜಿ ನಮೂನೆಯನ್ನುಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು.

300x250 AD

ಭರ್ತಿ ಮಾಡಿದ ಅರ್ಜಿಯನ್ನು ಡಿಡಿಯೊಂದಿಗೆ ಅ.12ರಂದು ಸಂಜೆ 5 ಗಂಟೆಯೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ- ಮೇಲ್ kannadappradhikara@gmail.com ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ದೂ.ಸಂ.: 080-22484516/ 22107704ನ್ನು ಸಂಪರ್ಕಿಸುವAತೆ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top