Slide
Slide
Slide
previous arrow
next arrow

ವಿಶ್ವ ವಿಕಲಚೇತನರ ದಿನಾಚರಣೆ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ರಾಜ್ಯ ಮಟ್ಟದಲ್ಲಿ ಆಚರಿಸುವ ವಿಶ್ವ ವಿಕಲಚೇತನರ ದಿನಾಚರಣೆಯಂದು ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ, ಇದಲ್ಲದೆ ವಿಶಿಷ್ಟ ಸಾಧನಗೈದಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ರಾಜ್ಯ ಪ್ರಶಸ್ತಿಯನ್ನು ನೀಡಲು ಪ್ರತಿ ವರ್ಷದಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರಿಗಾಗಿ ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಹಾಗೂ ಸರ್ಕಾರದ ವತಿಯಿಂದ ನಿರ್ವಹಿಸುತ್ತಿರುವ ವಿಶೇಷ ಶಾಲೆಗಳಲ್ಲಿ 15 ವರ್ಷಕ್ಕೂ ಮೇಲ್ಪಟ್ಟು ಸೇವೆ ಸಲ್ಲಿಸಿರುವ/ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೂ ಸಹ ರಾಜ್ಯ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ದಿನಾಂಕ ಡಿ.3ರಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಥವಾ ಇಲಾಖೆಯ ವೆಬ್‌ಸೈಟ್ (www.dwdsc.kar.nic.in) ಅಥವಾ ಇಲ್ಲಿಂದ ಪಡೆದು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅ.20 ಒಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಚೇರಿಯಲ್ಲಿ ಸಲ್ಲಿಸಲ್ಲಿಸಬೇಕು.

300x250 AD

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಬಾಲಭವನ ಬಿಲ್ಡಿಂಗ್ ಕಾರವಾರ ಅಥವಾ ದೂರವಾಣಿ ಸಂಖ್ಯೆ: 08382-200758 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This
300x250 AD
300x250 AD
300x250 AD
Back to top