ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ಭಾರತದ ವೈಮಾನಿಕ ಸಂಸ್ಥೆ ಹಿಂದೂಸ್ತಾನ್ ಇರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್)ನಲ್ಲಿ ತರಬೇತಿ ಪಡೆದುಕೊಂಡಿದ್ದಾರೆ.
ಓ0ಕಾರ್ ಬೊಂಗಾಳೆ, ಅಲಿ ಬಶೀರ್ ಅಹ್ಮದ್ ಆ.14ರಿಂದ 25ರವರೆಗೆ ವಿಮಾನ ನಿರ್ಮಾಣ, ನಿರ್ವಹಣೆ ಮತ್ತು ನಿಯಂತ್ರಣ ಕುರಿತಾಗಿ ನುರಿತ ತಜ್ಞರಿಂದ ತರಬೇತಿಯನ್ನು ಪಡೆದುಕೊಂಡರು. ವಿಡಿಐಟಿ ಮತ್ತು ಹೆಚ್‌ಎಎಲ್ ಕುರಿತಾಗಿ ಒಡಂಬಡಿಕೆ ಮಾಡಿಕೊಂಡಿವೆ.
ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹೆಚ್‌ಎಎಲ್‌ನಲ್ಲಿ ತರಬೇತಿ ಪಡೆದುಕೊಂಡಿರುವುದಕ್ಕೆ ಆಡಳಿತ ಮಂಡಳಿಯ ಅಧ್ಯಕ್ಷ ವಿನಾಯಕ ಲೋಕುರ್ ಹರ್ಷ ವ್ಯಕ್ತಪಡಿಸಿದ್ದಾರೆ. ದೇಶದ ಹೆಮ್ಮೆಯ ವೈಮಾನಿಕ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದುಕೊಂಡಿರುವುದು ಸಂತಸ ತಂದಿದೆ ಎಂದು ಪ್ರಾಚಾರ್ಯ ಡಾ.ವಿ.ಎ.ಕುಲಕರ್ಣಿ ಹೇಳಿದ್ದಾರೆ. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಮುರುಗಯ್ಯ ಎಸ್.ಬಿ., ಡೀನ್ ಪ್ರೊ.ಎಸ್.ಡಿ.ಕುಲಕರ್ಣಿ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.