ಯಲ್ಲಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕವಿ ಸುಬ್ರಾಯ ಬಿದ್ರೆಮನೆ ಅವರ ‘ಬೊಗಸೆ ತುಂಬ ಪ್ರೀತಿ’ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ಸೆ.2 ರಂದು ಬೆಳಗ್ಗೆ 11 ಕ್ಕೆ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಸಾಹಿತಿ ಎಂ.ಕೆ.ನಾಯಕ ಮಾಸ್ಕೇರಿ ಅವರು ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವೇಣುಗೋಪಾಲ ಮದ್ಗುಣಿ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿರಿಯ ಪತ್ರಕರ್ತ ಬೀರಣ್ಣ ನಾಯಕ ಮೊಗಟಾ ಕೃತಿ ಪರಿಚಯಿಸಲಿದ್ದಾರೆ. ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ ಭಾಗವಹಿಸಲಿದ್ದಾರೆ.