Slide
Slide
Slide
previous arrow
next arrow

ಇಂದು ಗಾಂಧಿಸ್ಮೃತಿ, ಮದ್ಯ ಮುಕ್ತರ ಸಮಾವೇಶ

300x250 AD

ಶಿರಸಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ನವಜೀವನ ಸಮಿತಿ ಸಂಯುಕ್ತಾಶ್ರಯದಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಪ್ರೇರಣೆಗಾಗಿ ಗಾಂಧಿಸ್ಮೃತಿ ಮತ್ತು ಮದ್ಯ ಮುಕ್ತರ ಸಮಾವೇಶವು ಅ.7ರ ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ ಮಾರಿಕಾಂಬಾ ದೇವಸ್ಥಾನದಿಂದ ಜಾಗೃತಿ ಜಾಥಾ ಪ್ರಾರಂಭವಾಗಿ, ಸಿ.ಪಿ.ಬಜಾರ್, ದೇವಿಕೆರೆ ಮಾರ್ಗದಿಂದ ಅಂಬೇಡ್ಕರ್ ಸಭಾಭವನ ತಲುಪಲಿದೆ. ಶಾಸಕ ಭೀಮಣ್ಣ ನಾಯ್ಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಳಿಂಗರಾಜ ವಹಿಸಲಿದ್ದಾರೆ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ ವಿನ್ಸೆಂಟ್ ಪಾಯಸ್ ಆಶಯ ಭಾಷಣ ಮಾಡಲಿದ್ದಾರೆ.

300x250 AD

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಶ್ರೀಧರ ಮಂದಲಮನಿ, ಸಿಪಿಐ ರಾಮಚಂದ್ರ ನಾಯಕ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷೆ ಗೌರಿ ನಾಯ್ಕ ಭಾಗವಹಿಸಲಿದ್ದಾರೆ. ಸಮಾಜಕ್ಕೆ ಕಂಟಕವಾಗಿರುವ ಮದ್ಯವ್ಯಸನವನ್ನು ತ್ಯಜಿಸಲು ಪ್ರೇರಣೆ ನೀಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಆಗಮಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

Share This
300x250 AD
300x250 AD
300x250 AD
Back to top