ಕಾರವಾರ: ಕರ್ನಾಟಕ ಲೋಕಾಯುಕ್ತ ಜಿಲ್ಲಾ ಕಚೇರಿಯ ಅಧಿಕಾರಿಗಳು ಅ.12ರಂದು ದಾಂಡೇಲಿಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ 11ರಿಂದ 1 ಗಂಟೆಯವರೆಗೆ ದಾಂಡೇಲಿಯ ನಗರಸಭೆ ಸಭಾಭವನದಲ್ಲಿ ಸಭೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಮಾಡಿ, ವಿಚಾರಣೆ ಮಾಡುವರು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯಲೋಪ ಕಳಪೆ ಕಾಮಗಾರಿ ಮಾಡುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ನಮೂನೆ- 1 ಮತ್ತು 2ರಲ್ಲಿ ಭರ್ತಿ ಮಾಡಿ ನೀಡಬಹುದಾಗಿದೆ ಹಾಗೂ ಸರ್ಕಾರಿ ಅಧಿಕಾರಿ ಅಥವಾ ನೌಕರರು ಲಂಚಕ್ಕೆ ಬೇಡಿಕೆ, ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಗುಪ್ತ ಮಾಹಿತಿಯನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.