Slide
Slide
Slide
previous arrow
next arrow

ಜನವಸತಿ ಮನೆಗಳಿಗೆ ಪೈಪ್‌ಲೈನ್ ಅಳವಡಿಕೆ: ಶಾಸಕ ಆರ್.ವಿ.ಡಿ. ಚಾಲನೆ

300x250 AD

ಜಿಲ್ಲಾ ಪಂಚಾಯತ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಯೋಗದಲ್ಲಿ 2022-23ನೇ ಸಾಲಿನ ಜಲಜೀವನ ಮಿಷನ್ ಯೋಜನೆಯಡಿ ಹಳಿಯಾಳ ತಾಲೂಕಿನ ಜನಗಾ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಗದ್ದಾ ಗ್ರಾಮದಲ್ಲಿ 385 ಜನವಸತಿ ಮನೆಗಳಿಗೆ, ನಾಗಶೆಟ್ಟಿಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಲೇಹಳ್ಳಿ ಗ್ರಾಮದಲ್ಲಿ 220 ಜನವಸತಿ ಮನೆಗಳಿಗೆ ಪೈಪ್‌ಲೈನ್ ಅಳವಡಿಸಿ ನಳ ಸಂಪರ್ಕ ಕಲ್ಪಿಸಿ ನೀರು ಪೂರೈಸುವ ಕಾಮಗಾರಿಯನ್ನು ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top