Slide
Slide
Slide
previous arrow
next arrow

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ

300x250 AD

ಹೊನ್ನಾವರ: ಹಳಿಯಾಳದ ಶಿವಾಜಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಎಸ್‌ಡಿಎಂ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಹನಾ ಖಾರ್ವಿ 100 ಮೀಟರ್ ಹರ್ಡಲ್ಸ್ ಹಾಗೂ 400 ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ, ಲೋಕೇಶ್ ಗೌಡ 400 ಮೀಟರ್ ಹರ್ಡಲ್ಸ್ ದ್ವಿತೀಯ ಸ್ಥಾನ, ಮನೋಜ್ ನಾಯ್ಕ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಸ್ಮೃತಿ ದೇವಳಿ ಶಟಲ್ ಬ್ಯಾಡ್ಮಿಂಟನಲ್ಲಿ ಪ್ರಥಮ ಸ್ಥಾನ, ಆದಿತ್ಯ ಹೆಗಡೆ ಚೆಸ್ ಪ್ರಥಮ, ಚೈತ್ರ ಕಾಮತ ಕರಾಟೆ ಪ್ರಥಮ ಸ್ಥಾನ, ರಿಲೇ ಬಾಯ್ಸ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

300x250 AD

ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share This
300x250 AD
300x250 AD
300x250 AD
Back to top