ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿದ್ದು, ಈ ಬಗ್ಗೆ ಗುಪ್ತಚರ ಮಾಹಿತಿಗಳು ಲಭಿಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ರಾಜ್ಯದ ಕರಾವಳಿ ಭಾಗ ಮತ್ತು ಅರಣ್ಯ ಪ್ರದೇಶಗಳಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ಚಟುವಟಿಕೆಗಳು ನಡೆಯದಂತೆ ಎಚ್ಚರಿಕೆಯನ್ನು ರಾಜ್ಯದ ಆಡಳಿತ ಕಟ್ಟುನಿಟ್ಟಾಗಿ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಕೆಲವು ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತನಾಡುವಂತೆ ಇಲ್ಲ. ಆದರೆ ಈ ಸಂಬಂಧ ಕರ್ನಾಟಕ ಪೆÇಲೀಸರು, ಎನ್‍ಐಎ ಜೊತೆಗೆ ಕರಾವಳಿ ಮತ್ತು ಸಮೀಪದ ಅರಣ್ಯ ಪ್ರದೇಶಗಳಲ್ಲಿ ನಡೆಯುವ ದೇಶ ವಿರೋಧಿ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ಸೂಚಿಸಲಾಗಿದೆ. ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಈ ಹಿಂದೆ ಎನ್‍ಐಎ ಬಂಧಿಸಿತ್ತು. ಮುಂದಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕರಾವಳಿ ಭಾಗದಲ್ಲಿ ನಡೆಯದಂತೆ ಹೆಚ್ಚು ಎಚ್ಚರಿಕೆ ವಹಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.