ಕಾರವಾರ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಎಸ್‌ಟಿ) ವಿಜ್ಞಾನ ಮತ್ತು ಮತ್ತು ಇಂಜಿನಿಯರಿಂಗ್‌ನಲ್ಲಿ ಪಿಹೆಚ್‌ಡಿ ಸಂಶೋಧನೆಗೆ ಕರ್ನಾಟಕ ಡಿಎಸ್‌ಟಿ- ಪಿಹೆಚ್‌ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ಪ್ರೋತ್ಸಾಹ ಸೋಸೈಟಿಯ ಮುಖಾಂತರ ಅನುಷ್ಠಾನಗೊಳಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಪಿಹೆಚ್‌ಡಿ ಪದವಿಗೆ ನೋಂದಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅ.30ರ ಸಂಜೆ 5 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ವೆಬ್‌ಸೈಟ್ http://ksteps.karnataka.gov.comನ್ನು ಸಂಪರ್ಕಿಸುವ0ತೆ ವ್ಯವಸ್ಥಾಪಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ