ಸಿದ್ದಾಪುರ: ಶಾಸಕ ಭೀಮಣ್ಣ ನಾಯ್ಕ ತಾಲೂಕಿನ ಹೆಗ್ಗರಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಸತಿ ಯೋಜನೆಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿದರು.
ಹೆಗ್ಗರಣಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಯೋಜನೆಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿ, ಸರ್ಕಾರದ ವಸತಿ ಯೋಜನೆಯ ಸದುಪಯೋಗ ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು ಎಂದರು. ಇದೇ ವೇಳೆ ಅಂಗಡಿಕಾರರಿಗೆ ಗ್ರಾಮ ಪಂಚಾಯ್ತಿಯ ಕಸದಬುಟ್ಟಿಯನ್ನು ಸಹ ವಿತರಿಸಿದರು.
ಈ ವೇಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮತ್ತಿತರರು ಹಾಜರಿದ್ದರು.