Slide
Slide
Slide
previous arrow
next arrow

ಇಸ್ರೇಲ್‌ನಲ್ಲಿ ಜಿಲ್ಲೆಯ 40ಕ್ಕೂ ಅಧಿಕ ಮಂದಿ : ಎಲ್ಲರೂ ಸುರಕ್ಷಿತ ಎಂದ ರಾಯಭಾರ ಕಚೇರಿ

300x250 AD

ಭಟ್ಕಳ: ಉದ್ಯೋಗದ ನಿಮಿತ್ತ ಇಸ್ರೇಲ್‌ನಲ್ಲಿ ನೆಲೆಸಿರುವ ಭಟ್ಕಳದ 40ಕ್ಕೂ ಅಧಿಕ ಮಂದಿ ಸದ್ಯ ಭಾರತೀಯ ರಾಯಭಾರ ಕಚೇರಿಯಿಂದ ಸಂಪರ್ಕಕ್ಕೆ ಸಿಕ್ಕಿದ್ದು, ಎಲ್ಲರೂ ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದರಿಂದ ಮನೆಮಂದಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಯಾವ ಕ್ಷಣದಲ್ಲೂ ಇಸ್ರೇಲ್‌ನಲ್ಲಿನ ಯುದ್ಧದ ಪರಿಸ್ಥಿತಿ ಏನು ಬೇಕಾದರೂ ಆಗಬಹುದು ಎಂಬುದು ಅಲ್ಲಿ ನೆಲೆಸಿರುವವರಿಗೂ ಹಾಗೂ ಅವರ ಕುಟುಂಬಸ್ಥರಲ್ಲಿ ಭಯ ಮಾತ್ರ ಇದೆ.

ಮುಂಡಳ್ಳಿಯ ಭಾಗದ 12 ಮಂದಿ ಹಾಗೂ ಮುರುಡೇಶ್ವರ ಬಸ್ತಿ ಚರ್ಚ್ ಕ್ರಾಸ್ ಬಳಿಯ 29 ಮಂದಿ ಇಸ್ರೇಲ್‌ನಲ್ಲಿ ನೆಲೆಸಿರುವುದು ದೃಢಪಟ್ಟಿರುವ ಪಟ್ಟಿ ಲಭ್ಯವಾಗಿದೆ. ಮುರುಡೇಶ್ವರದ ಚರ್ಚ್ ಕ್ರಾಸ್ ಬಳಿಯ ನಿವಾಸಿ ಇಸ್ರೇಲ್‌ನಲ್ಲಿ ನೆಲೆಸಿರುವ ಸುನೀಲ ಎಫ್.ಗೋಮ್ಸ ಮತ್ತು ಡಾಲ್ಪಿ ಗೋಮ್ಸ್ಸ್ ನಿವಾಸದಲ್ಲಿ ತಾಯಿ ಹೇಲಿನ್ ಗೋಮ್ಸ್ ಹಾಗೂ ಸಹೋದರಿ ಈರ್ವರ ಜೊತೆಗೆ ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ ಅವರ ಸುರಕ್ಷತೆಯ ಬಗ್ಗೆ ವಿಚಾರಿಸುತ್ತಿದ್ದಾರೆ. ಘಟನೆಯ ನಡೆದ ದಿನದಂದು ನಾವು ಜೀವ ಭಯದಲ್ಲಿಯೇ ಬದುಕಿದ್ದೆವು. ಘಟನೆ ನಡೆದ ಜಾಗದ ಸಮೀಪದಲ್ಲಿಯೇ ನಾವು ಕೆಲಸಕ್ಕಾಗಿ ನೆಲೆಸಿದ್ದ ಪ್ರದೇಶವಿದ್ದು ಯಾವ ಸಂಧರ್ಭದಲ್ಲಿ ಪರಿಸ್ಥಿತಿ ಏನಾಗಲಿದೆ ಎಂಬ ಭಯ ನಮ್ಮಲ್ಲಿದೆ. ಆದರೆ ಭಾರತೀಯ ರಾಯಭಾರಿ ಕಛೇರಿಯಿಂದ ಭಾರತೀಯರನ್ನು ಸಂಪರ್ಕಿಸುವ ಕಾರ್ಯ ಆರಂಭವಾಗಿದೆ ಎಂಬ ಮಾಹಿತಿಯ ಮೇಲೆ ನಮ್ಮಿಬ್ಬರು ಸಹ ಕಛೇರಿಯ ಸಿಬ್ಬಂದಿಗಳು ಸಂಪರ್ಕಿಸಿ ನಮ್ಮ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅನಾವಶ್ಯಕವಾಗಿ ಯಾರು ಸಹ ಓಡಾಟ ಮಾಡಬಾರದು ಎಂಬ ಕಠಿಣ ಆದೇಶವಿದ್ದು, ಅವಶ್ಯಕತೆಯಿದ್ದಲ್ಲಿ ಮಾತ್ರ ಓಡಾಡಲು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕೆಲವೊಂದು ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿಡಲಾಗಿದ್ದು, ಆಹಾರ ಹಾಗೂ ಇನ್ನಿತರ ವಸ್ತುಗಳ ಖರೀದಿಗೆ ತೆರಳಬಹುದಾಗಿದೆ. ಸಮಸ್ಯೆಯಿದ್ದಲ್ಲಿ ರಾಯಭಾರಿ ಕಛೇರಿಗೆ ಮಾಹಿತಿ ತಿಳಿಸಿದ್ದಲ್ಲಿ ನಿಮ್ಮನ್ನು ಸಂಪರ್ಕಿಸಲಿದ್ದೇವೆ. ಸೈರನ್ ಮೂಲಕ ಜನರು ಸುರಕ್ಷಿತ ಪ್ರದೇಶದಲ್ಲಿ ಇರುವಂತೆ ಮುಂಜಾಗೃತೆಗಾಗಿ ವ್ಯವಸ್ಥೆ ಮಾಡಲಾಗಿದ್ದು, ಜನರು ಸರಕಾರದ ಆದೇಶದಂತೆ ಪಾಲನೆ ಮಾಡಬೇಕು ಎಂದರು. ಇಸ್ರೇಲನಲ್ಲಿರುವ ನಮ್ಮ ರಕ್ಷಣೆಗೆ ಸುರಕ್ಷತೆಗಾಗಿ ಭಾರತೀಯ ರಾಯಭಾರಿ ಕಛೇರಿಯು ನಿರಂತರ ಸಂಪರ್ಕದಲ್ಲಿದ್ದು ಅವರಿಗೆ ನಾವೆಲ್ಲರು ಚಿರಋಣಿಯಾಗಿದ್ದೇವೆ. ಸದ್ಯ ಕನ್ನಡಿಗರೆಲ್ಲರು ಒಂದು ವಾಟ್ಸಾಪ್ ಗ್ರೂಪ್‌ ಮಾಡಿದ್ದು ನಾವೆಲ್ಲರೂ ನಿರಂತರ ಸಂಪರ್ಕದಲ್ಲಿದ್ದು ಸುರಕ್ಷಿತರಾಗಿದ್ದೇವೆ ಎಂದು ಇಸ್ರೇಲ್‌ನಲ್ಲಿ ನೆಲೆಸಿರುವ ಸುನೀಲ ಎಪ್.ಗೋಮ್ಸ್ ಮತ್ತು ಡಾಲ್ಪಿ ಗೋಮ್ಸ ಅವರು ಅನುಭವ ಹಂಚಿಕೊಂಡರು.

300x250 AD

ಇಸ್ರೇಲ್‌ನಲ್ಲಿ ನಡೆದ ರಾಕೆಟ್ ದಾಳಿಯ ಬಗ್ಗೆ ತಿಳಿದು ಒಂದು ಕ್ಷಣಕ್ಕೆ ನಮ್ಮ ಮಕ್ಕಳ ಪರಿಸ್ಥಿತಿಯ ಬಗ್ಗೆ ಭಯ ಉಂಟಾಯಿತು. ಆ ತಕ್ಷಣಕ್ಕೆ ಅವರನ್ನು ವಿಡಿಯೋ ಕಾಲ್ ಮೂಲಕ ಅವರನ್ನು ಸಂಪರ್ಕಿಸಿದಾಗ ನಾವಿಬ್ಬರು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿ ಬಳಿಕ ನಮಗೆ ಸಮಾಧಾನವಾಯಿತು. ಅಲ್ಲಿಂದ ಇಲ್ಲಿಯ ತನಕ ನಾವು ನಿರಂತರ ಅವರಿಗೆ ವಿಡಿಯೋ ಕಾಲ್ ಮಾಡಿ ಅವರ ಪರಿಸ್ಥೀತಿ ಬಗ್ಗೆ ಕೇಳುತ್ತಿದ್ದೇವೆ. ಸ್ಥಳಿಯ ಪೋಲೀಸರು ಸಹ ನಮ್ಮನ್ನು ಹಾಗೂ ಕುಟುಂಬದವರನ್ನು ನಿತ್ಯವೂ ಸಂಪರ್ಕಿಸುತ್ತಿದ್ದು, ಭಾರತೀಯ ರಾಯಭಾರಿ ಕಛೇರಿಗೆ ನಾವೆಲ್ಲರು ಧನ್ಯವಾದ ತಿಳಿಸಿಲಿದ್ದೇವೆ.

         – ಹೇಲಿನ್ ಗೋಮ್ಸ್, ಇಸ್ರೇಲ್‌ನಲ್ಲಿ ನೆಲೆಸಿರುವ ಯುವಕನ ತಾಯಿ

Share This
300x250 AD
300x250 AD
300x250 AD
Back to top