ಯಲ್ಲಾಪರ: ಸಮಾಜದ ಸ್ವಾಸ್ಥ್ಯ ಚೆನ್ನಾಗಿರಬೇಕೆಂದರೆ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಬಹು ಮುಖ್ಯ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷೆ ಸರಸ್ಪತಿ ಭಟ್ಟ ಹೇಳಿದರು.
ಅವರು ಮಂಗಳವಾರ ಬೆಳಿಗ್ಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಪಟ್ಟಣದ ವಿಶ್ವದರ್ಶನ ಬಿ.ಎಡ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಉದ್ಘಾಟಿಸಿ ಮಾತನಾಡಿದರು. ಮಾನಸಿಕ ಅಸ್ವಸ್ಥರನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಯ್ ಭಾರತೀಯ ಮಾತನಾಡಿ, ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಬದ್ಧರಾಗೋಣ ಎಂದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕಿ ವೀಣಾ ಭಾಗ್ವತ ನಿರ್ವಹಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ ವಂದಿಸಿದರು. ವೈದ್ಯಾಧಿಕಾರಿ ಡಾ.ರಮ್ಯಶ್ರೀ ಬಿ., ಹಿರಿಯ ವಕೀಲ ಆರ್.ಕೆ.ಭಟ್ಟ ಉಪನ್ಯಾಸ ನೀಡಿದರು. ವಕೀಲರಾದ ನಾಗರಾಜ ಎಂ.ಬಿ., ಪ್ರಾಂಶುಪಾಲ ಡಾ.ಎಸ್.ಎಲ್.ಭಟ್ಟ, ಡಾ.ತೇಜೇಶ್, ಸಹಾಯಕ ಸರ್ಕಾರಿ ವಕೀಲ ಝೀನತ್ ಬಾನು ಶೇಖ್ ವೇದಿಕೆಯಲ್ಲಿದ್ದರು.