Slide
Slide
Slide
previous arrow
next arrow

ಅತಿಕ್ರಮಣ ಪೂರ್ವ ಜಮೀನು ಸಮಸ್ಯೆಗೆ ತಿಂಗಳಲ್ಲಿ ಪರಿಹಾರ: ಜಿಲ್ಲಾಧಿಕಾರಿ

300x250 AD

ಕಾರವಾರ: ಬನವಾಸಿ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಅತಿಕ್ರಮಣ ಪೂರ್ವ ಜಮೀನು ಕುರಿತ ಸಮಸ್ಯೆಗೆ ಒಂದು ತಿಂಗಳಲ್ಲಿ ಪರಿಹಾರ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಅವರು ಬನವಾಸಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಪ್ರಮುಖ ಸಮಸ್ಯೆಯಾದ ಅತಿಕ್ರಮಣ ಪೂರ್ವ ಜಮೀನು ಸಮಸ್ಯೆ ಕುರಿತು ಸರ್ಕಾರಕ್ಕ್ಕೆ ಪತ್ರ ಬರೆಲಾಗಿದ್ದು, ಒಂದು ತಿಂಗಳ ಒಳಗೆ ಇದಕ್ಕೆ ಸೂಕ್ತ ಪರಿಹಾರ ದೊರೆಯಲಿದ್ದು, ಸಾಗುವಾಳಿದಾರರಿಗೆ ಹಕ್ಕುಪತ್ರ ನೀಡಲಾಗುವುದು ಎಂದರು.

ಖಾಯಂ ಲಾಗಣಿ ಸಮಸ್ಯೆ ಕುರಿತಂತೆ ವಾಸ್ತವಿಕ ಸಮಸ್ಯೆಗಳ ಬಗ್ಗೆ ಅರಣ್ಯ ಮತ್ತು ಕಂದಾಯ ಇಲಾಖೆ ಮೂಲಕ ಜಂಟಿ ಸ್ಥಳ ಪರಿಶೀಲನೆ ನಡೆಸಿ, ಅರಣ್ಯ ಇಲಾಖೆ ಸಮನ್ವಯದೊಂದಿಗೆ ಭೂ ಮಾಲೀಕರಿಗೆ ಭೂಮಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಬನವಾಸಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ಶೀಘ್ರದಲ್ಲೇ ದೊರೆಯಲು ಅನುಕೂಲವಾಗುವಂತೆ ಅಗತ್ಯವಿರುವ ಕಡೆಗಳಲ್ಲಿ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳನ್ನು ಶೀಘ್ರದಲ್ಲೇ ತೆರೆಯಲಾಗುವುದು ಎಂದರು.

ಬನವಾಸಿಯಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅತಿ ಹೆಚ್ಚಿನ ಸಮಸ್ಯೆಗಳಿಗೆ ತಕ್ಷಣ ಸೂಕ್ತ ಪರಿಹಾರ ಒದಗಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ದೂರುಗಳಿಗೆ ಸಂಬಂಧಿಸಿದಂತೆ ಪಿಡಿಓಗಳು ಸ್ಥಳ ಪರಿಶೀಲನೆ ನಡೆಸಿ, ಒಂದು ವಾರದ ಒಳಗೆ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶಿವರಾಮ್ ಹೆಬ್ಬಾರ್ ಮಾತನಾಡಿ, ಬನವಾಸಿ ವ್ಯಾಪ್ತಿಯಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಮುಕ್ತಾಯಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಮುಕ್ತಗೊಳಿಸಬೇಕು. ಬಂದೂಕು ಲೈಸೆನ್ಸ್ ಮತ್ತು ನವೀಕರಣವನ್ನು ಸರಳ ಮತ್ತು ಶೀಘ್ರವಾಗಿ ನೀಡಬೇಕು. ಲಾಗಾಣಿ ಜಮೀನು ಸಮಸ್ಯೆ, ಹಂಗಾಮಿ ಆರಣ್ಯ ಸಮಸ್ಯೆಗೆ ತಾತ್ವಿಕ ಅಂತ್ಯ ನೀಡಿ,ಶಾಶ್ವತ ಪರಿಹಾರ ನೀಡಬೇಕು. ಈ ಭಾಗದಲ್ಲಿ ನೀರಾವರಿ ಯೋಜನೆ ಪೂರ್ಣಗೊಂಡಿದ್ದರೂ ಸಹ ಅದರ ಪ್ರಯೋಜನ ಸುತ್ತಮುತ್ತಲಿನ ಗ್ರಾಮಗಳಿಗೆ ದೊರೆಯುತ್ತಿಲ್ಲ ಈ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದರು.

300x250 AD

ಶಿವಮೊಗ್ಗದಿಂದ ಬನವಾಸಿ ಗ್ರಿಡ್‌ಗೆ ವಿದ್ಯುತ್ ಸರಬರಾಜು ಮಾಡುವ ಮಾರ್ಗದಲ್ಲಿ ಇರುವ ಸಮಸ್ಯೆಗಳ ಕುರಿತಂತೆ ಎರಡು ಜಿಲ್ಲೆಯ ಅಧಿಕಾರಿಗಳು ಪರಸ್ಪರ ಚರ್ಚಿಸಿ, ಸಮನ್ವಯದಿಂದ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು. ಯಾವುದೇ ಸರ್ಕಾರ ಜನರ ಮನೆಬಾಗಿಲಿಗೆ ತೆರಳಿ, ಅವರ ಕುಂದು ಕೊರತೆ ಆಲಿಸಿ ಸೂಕ್ತ ಪರಿಹಾರ ನೀಡುವುದರಿಂದ ಜನಪರವಾಗಲು ಹಾಗೂ ಶಾಸಕಾಂಗ ಮತ್ತು ಕಾರ್ಯಾಂಗ ಒಂದಾಗಿ ಸಾಗುವುದರಿಂದ ರಾಜ್ಯದ ಜನತೆಯ ಸಮಗ್ರ ಪ್ರಗತಿ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ಜನತಾದರ್ಶನ ಉತ್ತಮ ಕಾರ್ಯಕ್ರಮವಾಗಿದೆ ಎಂದರು.

ಜನತಾ ದರ್ಶನದಲ್ಲಿ ರಸ್ತೆ ಅತಿಕ್ರಮಣ, ಕಂದಾಯ ಇಲಾಖೆ ಸಮಸ್ಯೆಗಳು, ಕುಡಿಯುವ ನೀರು ಮುಂತಾದ 165 ಕ್ಕೂ ಅಧಿಕ ದೂರುಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ದೂರುಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ನೇರವಾಗಿ ಅರ್ಜಿದಾರರಿಗೆ ಮಾಹಿತಿ ಸಲ್ಲಿಕೆಯಾಗಲಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪವಿಭಾಗಾಧಿಕಾರಿಗಳಾದ ದೇವರಾಜ ಆರ್., ಜಯಲಕ್ಷ್ಮಿ ರಾಯಕೋಡ್, ಬನವಾಸಿ ಗ್ರಾ.ಪಂ. ಅಧ್ಯಕ್ಷೆ ಬಿ.ಬಿ.ಆಯಿಷಾ, ಡಿಸಿಎಫ್ ಅಜಯ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. ಶಿರಸಿ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸ್ವಾಗತಿಸಿದರು.

Share This
300x250 AD
300x250 AD
300x250 AD
Back to top