Slide
Slide
Slide
previous arrow
next arrow

ಇಸ್ರೇಲ್‌ನಿಂದ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ 235 ಭಾರತೀಯರು

300x250 AD

ನವದೆಹಲಿ: ಇಸ್ರೇಲ್ ಮತ್ತು ಪ್ಯಾಲೆಸ್ತೇನ್‌ನಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿದ್ದು, ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದ 235 ಮಂದಿ ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ

ಶುಕ್ರವಾರವಷ್ಟೇ ಇಸ್ರೇಲ್‌ನಿಂದ 230 ಮಂದಿ ಭಾರತೀಯರು ಆಗಮಿಸಿದ್ದರು. ಶನಿವಾರ ಬೆಳಿಗ್ಗೆ ವಿಶೇಷ ವಿಮಾನದಲ್ಲಿ 235 ಮಂದಿ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಮುಂಜಾನೆ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು.

ಭಾರತಕ್ಕೆ ಬಂದವರಲ್ಲಿ ಒಂಬತ್ತು ಮಂದಿ ಕನ್ನಡಿಗರು ಸೇರಿದ್ದಾರೆ. ಇದರಲ್ಲಿ ಮೈಸೂರಿನ ಐವರು ಹಾಗೂ ಬೆಂಗಳೂರಿನ ಬಸವನಗುಡಿಯ ನಾಲ್ಕು ಮಂದಿ ಸೇರಿದ್ದಾರೆ. ತಾಯ್ಕಾಡಿಗೆ ಬಂದ ಭಾರತೀಯರನ್ನು ಕೇಂದ್ರ ಸಚಿವ ರಾಜಕುಮಾರ್ ರಾಜನ್‌ಸಿಂಗ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

300x250 AD

ಕೇಂದ್ರ ಸರ್ಕಾರಕ್ಕೆ ನಾವು ಎಷ್ಟು ಅಭಿನಂದನೆ ಸಲ್ಲಿಸಿದರೂ ಸಾಲದು. ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ನಾವು ಸುರಕ್ಷಿತವಾಗಿ ಬಂದಿದ್ದೇವೆ ಎಂದರೆ ಅಚ್ಚರಿಯೇ ಸರಿ. ನಮಗೆ ಕುಡಿಯಲು ಒಂದಿಷ್ಟು ನೀರು, ಹಣ್ಣು ಬಿಟ್ಟರೆ ಏನೂ ಸಿಗುತ್ತಿರಲಿಲ್ಲ. ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರ ನಮ್ಮನ್ನು ಕರೆಸಿಕೊಂಡಿದೆ. ಇದಕ್ಕಾಗಿ ನಾವು ಸದಾ ಕೃತಜ್ಞತರಾಗಿರುತ್ತೇವೆ ಎಂದು ಅನೇಕರು ಭಾವುಕರಾಗಿ ಹೇಳಿದರು.

Share This
300x250 AD
300x250 AD
300x250 AD
Back to top