Slide
Slide
Slide
previous arrow
next arrow

ಚಂದ್ರಯಾನ-3 ಮಿಷನ್‌ನ ಯಶಸ್ಸು: ಆ.23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’: ಕೇಂದ್ರ ಘೋಷಣೆ

300x250 AD

ನವದೆಹಲಿ: 2023ರ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್‌ನ ಲ್ಯಾಂಡಿಂಗ್ ಮತ್ತು ಚಂದ್ರನ ಮೇಯಲ್ಲಿ ಪ್ರಜ್ಞಾನ್ ರೋವರ್‌ನ ನಿಯೋಜನೆಯೊಂದಿಗೆ ಚಂದ್ರಯಾನ-3 ಮಿಷನ್‌ನ ಯಶಸ್ಸಿನ ನೆನಪಿಗಾಗಿ ಕೇಂದ್ರ ಸರ್ಕಾರವು ಪ್ರತಿವರ್ಷ ಆಗಸ್ಟ್ 23 ಅನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಶನಿವಾರ ಘೋಷಿಸಿದೆ.

ಇಸ್ರೋದ ಚಂದ್ರಯಾನ-3 ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುತ್ತಿದ್ದಂತೆ ಭಾರತವು ಐತಿಹಾಸಿಕ ಸಾಧನೆ ಮಾಡಿದ ಮೊದಲ ದೇಶವಾಗಿದೆ. ಯಶಸ್ವಿ ಚಂದ್ರಯಾನ-3 ಮಿಷನ್‌ನೊಂದಿಗೆ, ಯುಎಸ್, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟದ ನಂತರ ಭಾರತವು ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ದೇಶವಾಯಿತು.

ಗೆಜೆಟ್ ಅಧಿಸೂಚನೆಯಲ್ಲಿ, ಆಗಸ್ಟ್ 23 ಬಾಹ್ಯಾಕಾಶ ಯಾತ್ರೆಗಳಲ್ಲಿ ದೇಶದ ಪ್ರಗತಿಯಲ್ಲಿ ಪ್ರಮುಖ ಮೈಲಿಗಲ್ಲನ್ನು ಗುರುತಿಸುತ್ತದೆ, STEM(ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ) ಮುಂದುವರಿಸಲು ಯುವ ಪೀಳಿಗೆಗೆ ಹೆಚ್ಚಿನ ಆಸಕ್ತಿ ಬೆಳೆಸುತ್ತದೆ ಎಂದು ಹೇಳಲಾಗಿದೆ.

300x250 AD

https://x.com/ANI/status/1713150152809291936?s=20

Share This
300x250 AD
300x250 AD
300x250 AD
Back to top