ಶಿರಸಿ: ಅನೇಕ ಅಂಗ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ ಎಂಇಎಸ್ ಸಂಸ್ಥೆಗೆ ಸಂಪರ್ಕ ಸಾಧನವಾಗಿ ದ್ವಿಭಾಷಾ ತ್ರೈಮಾಸಿಕ ಪತ್ರಿಕೆಯನ್ನು ಹೊರತರಲು ಉದ್ದೇಶಿಸಿದ್ದು, ಪ್ರಥಮ ಸಂಚಿಕೆಯನ್ನು (ಜುಲೈ-ಸಪ್ಟೆಂಬರ್ 2023) ಸಂಸ್ಥೆಯ ಅಧ್ಯಕ್ಷರಾದ ಜಿ.ಎಂ. ಹೆಗಡೆ ಮುಳಖಂಡ ಅ.16ರಂದು ಬಿಡುಗಡೆಗೊಳಿಸಿದರು.
ಪತ್ರಿಕೆಯು ಸಂಸ್ಥೆಯ ಆಡಳಿತ ಮಂಡಳಿ, ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳ ನಡುವೆ ಮಧುರ ಬಾಂಧವ್ಯವನ್ನು ಬೆಸೆಯುವ ಮಾಧ್ಯಮವಾಗಿ ಹೊರಹೊಮ್ಮಿದೆ. ಈ ಪತ್ರಿಕೆಯು ಅಂತರ್ಜಾಲದಲ್ಲಿ (http://messirsi.org/newsletters.html) ಲಭ್ಯವಿದ್ದು ಜಗತ್ತಿನ ಎಲ್ಲಾ ಮೂಲೆಯಲ್ಲಿ ಇರುವ ಹಳೆ ವಿದ್ಯಾರ್ಥಿಗಳಿಗೆ ಉಚಿತವಾಗಿ ತಲುಪಲಿದೆ. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ಕಳೆದ ಆರು ದಶಕಗಳಲ್ಲಿ ಎಂಇಎಸ್ ನಡೆದು ಬಂದ ದಾರಿ, ಮುಂದಿನ ಯೋಜನೆಗಳು ಮೊದಲಾದ ಉಪಯುಕ್ತ ಮಾಹಿತಿಗಳನ್ನು ಒಳಗೊಂಡಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ತಿಳಿಸಿದ್ದಾರೆ.