Slide
Slide
Slide
previous arrow
next arrow

ಯೋಗಾಸನ ಸ್ಪರ್ಧೆ: ಸಿವಿಎಸ್‌ಕೆಯ ಪಾವನಿ ನಾಯ್ಕ ರಾಜ್ಯಮಟ್ಟಕ್ಕೆ

300x250 AD

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್‌ಕೆ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪಾವನಿ ಮೋಹನ ನಾಯ್ಕ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಇವರು ಗದಗ ತಾಲೂಕಿನ ಬಸವೇಶ್ವರ ಶಾಲೆಯಲ್ಲಿ ಆಯೋಜಿಸಿದ್ದ ವಿಭಾಗಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆ 2023-24 ರ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾಳೆ. ಪುರಸ್ಕಾರವು ಪ್ರಶಸ್ತಿ ಪತ್ರ ಹಾಗೂ ಚಿನ್ನದ ಪದಕಗಳನ್ನೊಳಗೊಂಡಿದೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕಿಯರು, ಶಿಕ್ಷಕ ವೃಂದ, ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top