Slide
Slide
Slide
previous arrow
next arrow

ಕಾಂಗ್ರೆಸ್ಸಿಗರ ವಿರುದ್ಧ ಭ್ರಷ್ಟಾಚಾರ ಆರೋಪ; ಬಿಜೆಪಿ ಪ್ರತಿಭಟನೆ

300x250 AD

ಯಲ್ಲಾಪುರ: ರಾಜ್ಯಭಾರ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿಗರು ಪಟ್ಟಣದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರಾಜ್ಯದಲ್ಲಿ ಕಮೀಶನ್ ಮೂಲಕ ಸಂಗ್ರಹಿಸಿದ ಹಣವನ್ನು ಕಾಂಗ್ರೆಸ್ ಪಂಚರಾಜ್ಯ ಚುನಾವಣೆಗೆ ಬಳಸಿಕೊಳ್ಳುತ್ತಿದೆ ಎಂದು ದೂರಿದರು. ಕಾಂಗ್ರೆಸ್ಸಿಗರು ಮತದಾರರನ್ನು ಭ್ರಮೆಯಲ್ಲಿ ತೇಲಿಸಿದ್ದಾರೆ. ಆಯ್ಕೆಯಾದ ನಂತರ ಕಾಂಗ್ರೆಸ್ ಎಲ್ಲ ರಂಗದಲ್ಲಿ ವಿಫಲವಾಗಿದೆ ಎಂದು ಪ್ರಮೋದ ಹೆಗಡೆ ದೂರಿದರು. ಜಿಲ್ಲೆಯ ವಿವಿಧ ಇಲಾಖೆಗಳ ಮೂಲಕವೂ ಸರ್ಕಾರ ವಸೂಲಿ ದಂಧೆ ನಡೆಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಎನ್.ಎಸ್.ಹೆಗಡೆ, ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ, ಪ್ರಮುಖರಾದ ಗುರುಪ್ರಸಾದ ಹೆಗಡೆ, ಪ್ರಸಾದ ಹೆಗಡೆ, ಉಮೇಶ ಭಾಗ್ವತ, ಗಣಪತಿ ಮಾನಿಗದ್ದೆ, ಶ್ರುತಿ ಹೆಗಡೆ, ಚಂದ್ರಕಲಾ ಭಟ್ಟ ಇತರರು ಇದ್ದರು.

300x250 AD

Share This
300x250 AD
300x250 AD
300x250 AD
Back to top