Slide
Slide
Slide
previous arrow
next arrow

ಜೇನು ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಸಿದ್ದಾಪುರ ತಾಲೂಕಿನ ಬಿಳಗಿ ಗ್ರಾಮದಲ್ಲಿ ಜೇನು ತರಬೇತಿ ಕೇಂದ್ರದಲ್ಲಿ 3 ತಿಂಗಳ ಅವಧಿಯ ಜೇನು ಕೃಷಿ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಕನಿಷ್ಟ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ತಂದೆ- ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಪರಿಶಿಷ್ಟ ಜಾತಿ ಅಭ್ಯರ್ಥಿಗಳು 18ರಿಂದ 35 ವಷÀðದೊಳಗಿರಬೇಕು ಹಾಗೂ ಇತರೆ ಅಭ್ಯರ್ಥಿಗಳು 18ರಿಂದ 30 ವರ್ಷದೊಳಗಿರಬೇಕು. ಅರ್ಜಿಯ ಶುಲ್ಕ ಪರಿಶಿಷ್ಟ ಜಾತಿಯವರಿಗೆ ರೂ.10 ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.20 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ (ಐಪಿಒ) ಡಿಮ್ಯಾಂಡ್ ಡ್ರಾಫ್ಟ್ನ್ನು ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರ (ಜಿ.ಪಂ) ರವರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಿರಬೇಕು.

300x250 AD

ಅರ್ಜಿ ನಮೂನೆಯನ್ನು ಇಲಾಖೆ ವೆಬ್‌ಸೈಟ್: https://horticulturedir.karnataka.gov.in ನ ಮೂಲಕ ಅಥವಾ ಅ.21ರಿಂದ 25ರವರೆಗೆ ತೋಟಗಾರಿಕೆ ಇಲಾಖೆ ಶಿರಸಿ ಕಛೇರಿಯಲ್ಲಿ ಪಡೆಯಬಹುದು. ಅ.27ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top