Slide
Slide
Slide
previous arrow
next arrow

ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಸಪ್ರಶ್ನೆ ಸ್ಪರ್ಧೆ

300x250 AD

ಹಳಿಯಾಳ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಸಪ್ರಶ್ನೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ರಸಪ್ರಶ್ನೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿ ಉತ್ಸಾಹದಿಂದ ಪ್ರಶ್ನೆಗಳಿಗೆ ಉತ್ತರಿಸಿದರು.

ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸತೀಶ್ ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೂಪಾ ತುರಮರಿ, ಕ್ಷಯರೋಗ ಮೇಲ್ವಿಚಾರಕ ರಾಹುಲ್ ಬಾಂದೇಕರ್ ಮತ್ತು ಪ್ರವೀಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top