Slide
Slide
Slide
previous arrow
next arrow

ನ.1ರಿಂದ ಶಿರಸಿ-ಕುಮಟಾ ಹೆದ್ದಾರಿ ಸಂಚಾರ ನಿರ್ಬಂಧ: ಬದಲಿ ವ್ಯವಸ್ಥೆ ಮಾಹಿತಿ ಇಲ್ಲಿದೆ

300x250 AD

ಶಿರಸಿ: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ 766(E) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನಲೆಯಲ್ಲಿ ನವೆಂಬರ್ 1 ರಿಂದ ಮೇ 31ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಶಿರಸಿಯ ಸಹಾಯಕ ಆಯುಕ್ತ ಆರ್.ದೇವರಾಜ ಹೇಳಿದರು.

ಮಾಧ್ಯಮಗಳೊಂದಿಗೆ ಶಿರಸಿಯಲ್ಲಿ ಮಾತನಾಡಿದ ಅವರು ಹೆದ್ದಾರಿ ಅಗಲೀಕರಣಕ್ಕೆ ಆರ್.ಎನ್.ಎಸ್.ಕಂಪನಿಗೆ ಗುತ್ತಿಗೆ ನೀಡಲಾಗಿದೆ.

2020 ರಲ್ಲೇ ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನ ನಿರ್ಬಂಧಕ್ಕೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದರು.ಇದೀಗ ಹೆದ್ದಾರಿ ಪ್ರಾಧಿಕಾರವು ಸಹ ಸಂಚಾರ ದಟ್ಟಣೆ ಕಡಿಮೆ ಮಾಡಿ ಕಾಮಗಾರಿ ಮುಗಿಸಲು ವಾಹನ ಸಂಚಾರ ನಿರ್ಬಂಧಿಸುವಂತೆ ಕೋರಿದೆ.ಈಗಾಗಲೇ ಅಗಲೀಕರಣದ 33ಕಿಲೋಮೀಟರ್ ವ್ಯಾಪ್ತಿಯಲ್ಲಿ 26 ಕಿಲೋಮೀಟರ್ ವರೆಗೂ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ವಾಹನಗಳಿಗೆ ನಿರ್ಬಂಧಿಸುತಿದ್ದೇವೆ ಎಂದಿದ್ದಾರೆ.

ಇನ್ನು ವಾಹನ ಸವಾರರಿಗೆ ಬದಲಿ ವ್ಯವಸ್ಥೆ ಕಲ್ಪಿಸಿದ್ದು ಕುಮಟಾ-ದೊಡ್ಮನೆ-ಸಿದ್ದಾಪುರ-ಶಿರಸಿ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಹೊನ್ನಾವರ-ಮಾವಿನಗುಂಡಿ, ಸಿದ್ದಾಪುರ, ಶಿರಸಿ ಮಾರ್ಗದಲ್ಲಿ ಎಲ್ಲ ತರದ ವಾಹನಗಳಿಗೆ ಅವಕಾಶ ಮಾಡಿಕೊಟ್ಟಿದ್ದು ಶಿರಸಿ-ಯಾಣ-ವಡ್ಡಿ- ಕುಮಟಾ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ,ಶಿರಸಿಯಿಂದ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಮಾರ್ಗದಲ್ಲಿ ಎಲ್ಲ ತರದ ಭಾರಿ ವಾಹನಗಳ ಸಹಿತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಘಟ್ಟ ಭಾಗದ ಯಾಣ ಮತ್ತು ದೊಡ್ಮನೆ ಮಾರ್ಗದಲ್ಲಿ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಿದೆ ಎಂದು ಶಿರಸಿಯ ಸಹಾಯಕ ಆಯುಕ್ತ ಆರ್.ದೇವರಾಜ್ ಮಾಹಿತಿ ನೀಡಿದರು.

300x250 AD

Share This
300x250 AD
300x250 AD
300x250 AD
Back to top