ನವದೆಹಲಿ: ಚೀನಾದ ಹ್ಯಾಂಗ್ಝೌ ಒಲಿಂಪಿಕ್ ಸ್ಪೋರ್ಟ್ಸ್ ಎಕ್ಸ್ಪೋ ಸೆಂಟರ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ದೊರೆತಿದ್ದು, ಪ್ಯಾರಾ ಕೆನೋಯಿಂಗ್ ಮಹಿಳೆಯರ VL2 ಫೈನಲ್‌ನಲ್ಲಿ ಪ್ರಾಚಿ ಯಾದವ್ ಬೆಳ್ಳಿ ಪದಕ ಜಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರಾಚಿ ಯಾದವ್ ಅವರಿಗೆ ಅಭಿನಂದನೆಗಳನ್ನ ಸಲ್ಲಿಸಿದ್ದು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೊದಲ ಪದಕವನ್ನು ಗಳಿಸುವ ಮೂಲಕ ಪ್ರಾಚಿ ಯಾದವ್ ಭಾರತೀಯ ಕ್ರೀಡಾ ಇತಿಹಾಸದಲ್ಲಿ ತನ್ನ ಹೆಸರನ್ನು ಬರೆದಿದ್ದಾರೆ. ಪ್ಯಾರಾ ಕೆನೋಯಿಂಗ್ ಮಹಿಳೆಯರ VL2 ಫೈನಲ್‌ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ ಅವರಿಗೆ ಅಭಿನಂದನೆಗಳು. ಆಕೆಯ ಅದ್ಭುತ ಪ್ರದರ್ಶನವು ಇಡೀ ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದಿದ್ದಾರೆ.
ಏಷ್ಯನ್ ಪ್ಯಾರಾ ಗೇಮ್ಸ್ ಆರಂಭಕ್ಕೂ ಮೊದಲು ಇಡೀ ಭಾರತೀಯ ತಂಡಕ್ಕೆ ಮೋದಿ ಶುಭಾಶಯಗಳನ್ನು ಕೋರಿ ಟ್ವಿಟ್ ಮಾಡಿದ್ದರು. ಭಾರತವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವು ಸ್ಪೂರ್ತಿದಾಯಕ ಜೀವನ ಪಯಣವನ್ನು ಹೊಂದಿದ್ದಾರೆ. ಭಾರತೀಯ ಕ್ರೀಡಾಸ್ಫೂರ್ತಿಯ ನಿಜವಾದ ಸಾರವನ್ನು ಅವರು ತೋರಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.