ಶಿರಸಿ: ಶುಕ್ರವಾರ ನಗರದಲ್ಲಿ ನಡೆದ ಕಾರ್ಮಿಕ ಅದಾಲತ್ ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿ ಕಾರ್ಮಿಕ ಇಲಾಖೆಯ ವತಿಯಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಇಲಾಖೆಯಿಂದ ಶಿಶುಜನನ, ಶೈಕ್ಷಣಿಕ, ಸ್ಕಾಲರಷಿಫ್,ವಿಮೆ,ಅಪಘಾತ,
ಅಂತ್ಯಸಂಸ್ಕಾರ ದವರೆಗೂ ಸಿಗುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಅವರು ಹೇಳಿದರು.
ಈ ಸೌಲಭ್ಯಗಳನ್ನು ಜನತೆಗೆ ತಲುಪಿಸುವಲ್ಲಿ ಶ್ರಮಿಸುತ್ತಿರುವ ಪ್ರಧಾನ ಮಂತ್ರಿ, ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಹಾಗು ಕಾರ್ಮಿಕ ಇಲಾಖೆ ಸಚಿವ ಶಿವರಾಂ ಹೆಬ್ಬಾರ ಅವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿರಸಿ ನಗರ ಸಭೆ ಅಧ್ಯಕ್ಷ ಗಣಪತಿ ನಾಯ್ಕ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಂದನ ಸಾಗರ, ತಹಸೀಲ್ದಾರ ಎಮ್ ಆರ್ ಕುಲಕರ್ಣಿ, ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.