Slide
Slide
Slide
previous arrow
next arrow

ಗಮನ ಸೆಳೆದ ‘ಕಲ್ವತಂ’ ತಂಡದ ಕೊಳಲು ವಾದನ

300x250 AD

ದಾಂಡೇಲಿ: ಇಲ್ಲಿನ ನವರಾತ್ರಿ ಉತ್ಸವ ಸಮಿತಿಯ ಆಶ್ರಯದಡಿ ಹಳೆ ನಗರಸಭೆಯ ಮೈದಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕಲ್ವತಂ ತಂಡದಿಂದ ನಡೆದ ಕೊಳಲು ವಾದನ ಹಾಗೂ ರಸಮಂಜರಿ ಕಾರ್ಯಕ್ರಮವು ಅಪಾರ ಜನಾಕರ್ಷಣೆಗೆ ಪಾತ್ರವಾಯಿತು.

ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಹಾಗೂ ಮಾಜಿ ಶಾಸಕ ಸುನಿಲ್ ಹೆಗಡೆ ಅವರ ಅಳಿಯ, ಕೊಳಲುವಾದಕ ಗೌತಮ್ ನಾಯಕ್ ಅವರ ನೇತೃತ್ವದಲ್ಲಿ ಕೊಳಲು ವಾದನ ಮತ್ತು ರಸಮಂಜರಿ ಕಾರ್ಯಕ್ರಮ ಜರುಗಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಮಹನೀಯರನ್ನು ಹಾಗೂ ಪತ್ರಕರ್ತರನ್ನು ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಆಶ್ರಯದಲ್ಲಿ ಸನ್ಮಾನಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top