Slide
Slide
Slide
previous arrow
next arrow

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ವಿಷ್ಣು ದೇವಾಡಿಗ ನೇಮಕ

300x250 AD

ಭಟ್ಕಳ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅನುಮೋದನೆಯ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ವಿಷ್ಣು ದೇವಾಡಿಗ ಅವರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವಕರ್ ಪ್ರಕಟಣೆ ಹೊರಡಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಮುಖಂಡರು, ಬ್ಲಾಕ್ ಕಾಂಗ್ರೆಸ್ ಸಮಿತಿ ಸಹಯೋಗದೊಂದಿಗೆ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಶ್ರಮಿಸಬೇಕು ಎಂದು ಅವರು ನೇಮಕಾತಿ ಪತ್ರದಲ್ಲಿ ತಿಳಿಸಿದ್ದಾರೆ. ವಿಷ್ಣು ದೇವಾಡಿಗ ಈ ಹಿಂದೆ ಎನ್‌ಎಸ್‌ಐಯು ಅಧ್ಯಕ್ಷ, ತಾಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ತಾಲೂಕು ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ, ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ.

ಬೆಂಗ್ರೆ ಪಂಚಾಯತ ಸದಸ್ಯರಾಗಿ 3 ಬಾರಿ ಆಯ್ಕೆಯಾಗಿದ್ದಲ್ಲದೇ, ತಾಲೂಕು ಪಂಚಾಯತ ಸದಸ್ಯರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ ಅನುಭವ ಇವರಿಗೆ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

300x250 AD

Share This
300x250 AD
300x250 AD
300x250 AD
Back to top