ಕಾರವಾರ: ಕಾರವಾರದಲ್ಲಿ ಮಾರುತಿ ನಾಯ್ಕ ಎಂಬಾತ ಪೋಲಿಸ್ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿದ್ದಾರೆ.
ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಬರೆದ ಸುಸೈಡ್ ನೋಟ್, ಮಾಡಿದ ವಿಡಿಯೋ ರೆಕಾರ್ಡ್‌ನಲ್ಲಿ ತನ್ನ ಆತ್ಮಹತ್ಯೆಗೆ ಪೊಲೀಸರು, ಎಲಿಷಾ ಎಲಕಪಾಟಿ, ಬಸವರಾಜ, ಸುರೇಶ್ ಇನ್ನಿತರರ ಹೆಸರುಗಳನ್ನು ನಮೂದಿಸಿದ್ದು, ಈ ಆಧಾರದ ಮೇಲೆ ಸಿಪಿಐ ಕುಸುಮಾಧರ ಕೆ., ಪಿಎಸ್ಐ ಶಾಂತಿನಾಥ, ಕಾನ್ಸ್ಟೆಬಲ್ ದೇವರಾಜ್ ಇವರನ್ನು ಅಮಾನತುಗೊಳಿಸಲಾಗಿದೆ.
ದಲಿತ ಮುಖಂಡ ಎಲಿಷಾ ಎಲಕಪಾಟಿ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನ ಮಾರುತಿ ನಾಯ್ಕ ರೆಕಾರ್ಡ್ ಮಾಡಿದ್ದ ಬಳಿಕ, ಎಲಿಷ ಎಲಕಪಾಟಿ ಕುಟುಂಬಸ್ಥರು ಮಾರುತಿ ನಾಯ್ಕ ಮೇಲೆ ಹಲ್ಲೆ ನಡೆಸಿದ್ದರು. ಎಲಿಷಾ ಕುಟುಂಬಕ್ಕೆ ಪೊಲೀಸರು ಬೆಂಬಲವಾಗಿ ನಿಲ್ಲುವ ಮೂಲಕ ತನಗೆ ಕಿರುಕುಳ ನೀಡುತ್ತಿರುವುದಾಗಿ ಮೃತ ಮಾರುತಿ ನಾಯ್ಕ ಆರೋಪಿಸಿದ್ದರು.
ಈ ಎರಡು ಪ್ರಕರಣಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರೂ, ಮಾರುತಿ ನಾಯ್ಕರಿಗೆ ಪ್ರಕರಣದಲ್ಲಿ ಯಾವುದೇ ನ್ಯಾಯ ಸಿಕ್ಕಿರಲಿಲ್ಲ. ಆದರೆ ಪ್ರಕರಣ ಸಂಬಂಧ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅಕ್ಟೋಬರ್ 20ರಂದು ಮಾರುತಿ ನಾಯ್ಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಳ್ಳುವ ಪೂರ್ವದಲ್ಲಿ ಡೆತ್ ನೋಟ್ ಹಾಗೂ ವಿಡಿಯೋ ರೆಕಾರ್ಡ್ ಮಾಡಿಟ್ಟಿದ್ದುನ್ನು ಪರಿಶೀಲಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಮಾಡಲಾಗಿದೆ ಎಂದು ಜಿಲ್ಲಾಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹೇಳಿದ್ದಾರೆ.