ಭಟ್ಕಳ: ತಾಲೂಕಿನ ಹಾಡವಳ್ಳಿಯ ಕೊಡಮಕ್ಕಿಯಲ್ಲಿ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೇತ್ರಾ ಗೋವಾಳಿ ಮೃತ ಯುವತಿಯಾಗಿದ್ದು, ಈಕೆ ವಕೀಲರೊಬ್ಬರ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಈಕೆಗೆ ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಎನ್ನುವಾತ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ, ಅಶ್ಲೀಲ ಫೋಟೋಗಳನ್ನು ಫೇಸ್ಬುಕ್ನಲ್ಲಿ ಹಾಕಿ ಮಾನ- ಮರ್ಯಾದೆ ತೆಗೆದು ಸಾಯಿಸುತ್ತೇನೆ ಎಂದು ಬೆದರಿಸಿದ್ದ. ಇದರಿಂದಲೇ ತನ್ನ ಮಗಳು ಮನನೊಂದು ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಗೋವರ್ಧನ ಮೊಗೇರನೇ ತನ್ನ ಮಗಳ ಸಾವಿಗೆ ಕಾರಣ ಎಂದು ಮೃತಳ ತಂದೆ ಮುತ್ತಯ್ಯ ಗೋವಾಳಿ ದೂರು ದಾಖಲಿಸಿದ್ದಾರೆ.
ದೂರು ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪಿಎಸ್‌ಐ ಶ್ರೀಧರ ನಾಯ್ಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.