Slide
Slide
Slide
previous arrow
next arrow

ಅ.28ಕ್ಕೆ ‘ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮ: ಸನ್ಮಾನ

300x250 AD

ಶಿರಸಿ: ತಾಲೂಕಾಡಳಿತ, ತಾಲೂಕಾ ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ‘ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ’ ಕಾರ್ಯಕ್ರಮದ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆಯು ನಗರದ ಬಿಡಕಿಬೈಲಿನಿಂದ ಅ.28, ಶನಿವಾರ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದ್ದು, ಅದೇ ದಿನ ಬೆಳಿಗ್ಗೆ 10.30ಕ್ಕೆ ನಗರದ ಅಂಬೇಡ್ಕರ್ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸುವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಭೀಮಣ್ಣ ನಾಯ್ಕ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ, ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರು, ಶಾಸಕ ಶಿವರಾಮ ಹೆಬ್ಬಾರ್, ವಿ.ಪರಿಷತ್ ಶಾಸಕ ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ್, ಸ್ಥಾಯಿ ಸಮಿತಿ ಅಧ್ಯಕ್ಷೆ ದೀಪಾ ಮಹಾಲಿಂಗಣ್ಣನವರ, ನಗರಸಭೆ ಸದಸ್ಯ ಶ್ರೀಕಾಂತ ಬಳ್ಳಾರಿ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಸಹಾಯಕ ಆಯುಕ್ತ ದೇವರಾಜ್ ಆರ್., ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಬಸವರಾಜ್, ಪೋಲಿಸ್ ಉಪಾಧೀಕ್ಷಕ ಗಣೇಶ್ ಕೆ.ಎಲ್.ಉಪಸ್ಥಿತಿ ನೀಡಲಿದ್ದು, ಸಂತೊಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಿರೀಶ್ ವಾಲ್ಮೀಕಿ ಉಪನ್ಯಾಸ ನೀಡಲಿದ್ದಾರೆ.

2022-23ನೇ ಸಾಲಿನ ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ‌ ಪದವಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ತಲಾ ಇಬ್ಬರು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಎರಡು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD

Share This
300x250 AD
300x250 AD
300x250 AD
Back to top