ಶಿರಸಿ: ಜೀವನದಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯವೂ ಕೂಡ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸುವ ದೃಷ್ಟಿಯಿಂದ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅನೇಕ ವಿದ್ಯಾರ್ಥಿಗಳು ಸ್ವ ಆಸಕ್ತಿಯಿಂದ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ ಎಂದು ಕಾಲೇಜು ಉಪಸಮಿತಿ ಅಧ್ಯಕ್ಷ ಎಸ್. ಕೆ. ಭಾಗವತ್ ಹೇಳಿದರು.
ಅವರು ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಿಂಗರ್ ಇಂಡಿಯ ಬೆಂಗಳೂರು, ರೋಟರಿ ಕ್ಲಬ್, ಇನ್ನರ್ವಿಲ್ ಕ್ಲಬ್ ಆಫ್ ಶಿರಸಿ ಹೆರಿಟೇಜ್ ಹಾಗೂ ಐ.ಕ್ಯೂ.ಎ.ಸಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವ್ಯವಸ್ಥಿತವಾಗಿ ಹೊಲಿಗೆ ತರಬೇತಿ ಕಾರ್ಯಕ್ರಮ ಮುನ್ನಡೆಸಿಕೊಂಡು ಹೋಗಲು ಎಲ್ಲಾ ಸಹಕಾರ ಸೌಲಭ್ಯವನ್ನು ನೀಡಲಾಗುವುದು ಎಂದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಇನ್ನರ್ವೀಲ್ ಕ್ಲಬ್ ನ ಅಂತರ ರಾಜ್ಯ ಮುಖ್ಯ ನಿರ್ವಾಹಕಿ ವೈಶಾಲಿ ಲೋಖಂಡೆ ವಿದ್ಯಾರ್ಥಿನಿಯರಲ್ಲಿ ಕೌಶಲ್ಯ ಬೆಳೆಯಲು ಹೊಲಿಗೆ ತರಬೇತಿ ಉತ್ತಮ ಸಾಧನವಾಗಿದೆ.ವಿದ್ಯಾರ್ಥಿನಿಯರು ಸ್ವಾವಲಂಬಿಯಾಗಿ ಜೀವನ ನಿರ್ವಹಿಸಿಕೊಂಡು ಹೋಗಲು ಇದು ಸಹಕಾರಿಯಾಗಿದೆ ಎಂದರು. ಇದೇ ಸಂದರ್ಭದಲ್ಲಿ ಮೊದಲನೇ ಬ್ಯಾಚ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಹೆಗಡೆ, ಇನ್ನರ್ ವೀಲ್ ಕ್ಲಬ್ ಆಫ್ ಶಿರಸಿ ಹೆರಿಟೇಜ್ ಅಧ್ಯಕ್ಷೆ ಶ್ರೀಮತಿ ಪುಷ್ಪಲತಾ ಭಟ್ , ತರಭೆತುದಾರೆ ನಾಗರತ್ನಾ ಹೆಗಡೆ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್ ಹಳೆಮನೆ ಸ್ವಾಗತಿಸಿ, ಪ್ರಾಸ್ತಾವಿಸಿದರು.ಡಾ. ದಿವ್ಯ ಹೆಗಡೆ ನಿರೂಪಿಸಿ, ವಂದಿಸಿದರು.