Slide
Slide
Slide
previous arrow
next arrow

ಅಕ್ರಮ ಮರಳು ದಾಸ್ತಾನಿನ ಮೇಲೆ ಡಿಸಿ ನೇತೃತ್ವದ ಅಧಿಕಾರಿಗಳ ದಾಳಿ

300x250 AD

ಕುಮಟಾ: ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಾಸ್ತಾನು ಮತ್ತು ಅಕ್ರಮ ಮರಳು ಸಾಗಾಟ ನಡೆಸುವವರಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲೆಯಾದ್ಯಂತ ಅನಿರೀಕ್ಷಿತ ದಾಳಿ ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಮತ್ತು ಮರಳು ಸಾಗಾಟದ ವಾಹನಗಳನ್ನು ವಶಪಡಿಸಿಕೊಂಡು ಅಕ್ರಮದಲ್ಲಿ ತೊಡಗಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 4 ಗಂಟೆಗೆ ಕಾರ್ಯಾಚರಣೆ ಆರಂಭಿಸಿದ ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೇರಿದಂತೆ ಯಾವುದೇ ಇಲಾಖೆಗೆ ಮುನ್ಸೂಚನೆ ನೀಡದೇ, ಅಕ್ರಮದ ಕುರಿತು ತಮಗೆ ದೊರೆತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದರು. ದಾಳಿ ಸಂದರ್ಭದಲ್ಲಿ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಸಂಗ್ರಹ, ಮರಳು ತುಂಬಿಕೊAಡು ತೆರಳುತ್ತಿದ್ದ ವಾಹನ, ಮರಳು ತುಂಬಿದ್ದ ವಾಹನಗಳನ್ನು ಕಂಡ ಜಿಲ್ಲಾಧಿಕಾರಿಗಳು ಕೂಡಲೇ ಸಂಬAದಪಟ್ಟ ತಾಲೂಕಿನ ತಹಸೀಲ್ದಾರ್‌ಗೆ ಅವುಗಳನ್ನು ವಶಪಡಿಸಿಕೊಳ್ಳುವಂತೆ ಮತ್ತು ಅಕ್ರಮದಲ್ಲಿ ತೊಡಗಿರುವವನ್ನು ಬಂಧಿಸುವAತೆ ಸೂಚನೆ ನೀಡಿದರು.

ಅಂಕೋಲಾ ಮತ್ತು ಕುಮುಟಾ ತಾಲೂಕಿನಲ್ಲಿ ದಾಳಿ ನಡೆಸಿದ ಜಿಲ್ಲಾಧಿಕಾರಿಗಳು, ಶಿರೂರು, ಕೋಡ್ಕಣಿ, ಮಿರ್ಜಾನ, ದಿವಗಿ, ತಾರಿಬಾಗಿಲು, ಹೆಗಡೆ ಪ್ರದೇಶಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಪ್ರದೇಶಗಳಿಗೆ ದಾಳಿ ನೆಡೆಸಿ, ಅಕ್ರಮದ ವಿರುದ್ಧ ಕಾನೂನು ಕ್ರಮ ಕೈಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕುಮಟಾ ಉಪವಿಭಾಗಾಧಿಕಾರಿ ಕಲ್ಯಾಣಿ, ತಹಶೀಲ್ದಾರ್ ಸತೀಶ್ ಗೌಡ, ಅಂಕೋಲಾ ತಹಶೀಲ್ದಾರ್ ಅಶೋಕ್ ಭಟ್ ಮತ್ತು ಕಂದಾಯ ಇಲಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

300x250 AD

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ನೇತೃತ್ವದ ಮತ್ತೊಂದು ಅಧಿಕಾರಿಗಳ ತಂಡ ಕೂಡಾ ಜಿಲ್ಲೆಯ ಇತರೆ ಭಾಗದಲ್ಲಿ ಕಾರ್ಯಚರಣೆ ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಮತ್ತು ಮರಳು ಸಾಗಾಟದ ವಾಹನಗಳನ್ನು ವಶಪಡಿಸಿಕೊಂಡರು. ಈ ದಾಳಿಯಲ್ಲಿ ಜಿಲ್ಲಾಧಿಕಾರಿ ಅವರ ಮಾರ್ಗದರ್ಶನದಲ್ಲಿ 60ಕ್ಕೂ ಹೆಚ್ಚು ಕಂದಾಯ ಇಲಾಖೆಯ ಸಿಬ್ಬಂದಿಗಳು 16 ವಾಹನಗಳಲ್ಲಿ 4 ತಂಡಗಳಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದ್ದು, ಸುಮಾರು 200 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿದ್ದು, ಇದರ ಅಂದಾಜು ಮೌಲ್ಯ ರೂ.2.5 ಲಕ್ಷಗಳಾಗಿದೆ.

Share This
300x250 AD
300x250 AD
300x250 AD
Back to top