Slide
Slide
Slide
previous arrow
next arrow

ಇ-ಶ್ರಮ್ ನೋಂದಣಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಅಸಂಘಟಿತ ಕಾರ್ಮಿಕರ ಸಮಗ್ರ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್‌ನಲ್ಲಿ ನೊಂದಾಯಿಸಲಾಗುತ್ತಿದೆ. 31 ಮಾರ್ಚ್ 2022ರೊಳಗೆ ನೊಂದಣಿಯಾಗಿ ಮತ್ತು ಈ ದಿನಾಂಕದಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೊಜನೆಯಡಿ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತಿದ್ದು, ಅರ್ಹ ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಪಘಾತದಿಂದ ಮರಣ ಹೊಂದಿದ್ದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‌ಐಆರ್/ಪಂಚನಾಮೆ, ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಫಲಾನುಭವಿಗಳ ಆಧಾರ್ ಸಂಖ್ಯೆ,  ಯುಎಎನ್ ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ,ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಚ್ ಸಾರಾಂಶ ಒಳಗೊಂಡಿರುವ ಆಸ್ಪತ್ರೆಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

300x250 AD

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಚೇರಿ ಅಥವಾ ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳ ಕಚೇರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top