ಕಾರವಾರ: ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನ.1ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್. ವೈದ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಅನಂತ ಕುಮಾರ ಹೆಗಡೆ, ಶಾಸಕರಾದ ಸತೀಶ್ ಕೆ.ಸೈಲ್, ಆರ್.ವಿ.ದೇಶಪಾಂಡೆ, ಶಿವರಾಮ ಹೆಬ್ಬಾರ್, ದಿನಕರ ಕೆ.ಶೆಟ್ಟಿ, ಭೀಮಣ್ಣ ಟಿ.ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರು, ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ ಮತ್ತಿತರು ಪಾಲ್ಗೊಳ್ಳಲಿದ್ದಾರೆ.